ಶಾಲಾ, ಕಾಲೇಜ್ ಗಳ ಆರಂಭಕ್ಕೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ

ನವದೆಹಲಿ: ಲಾಕ್ ಡೌನ್ ನಿಂದಾಗಿ ಬಂದ್ ಆಗಿರುವ ಶಾಲಾ, ಕಾಲೇಜ್ ಗಳ ಆರಂಭಕ್ಕೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈಗಾಗಲೇ ಯುಜಿಸಿ ಸೆಮಿಸ್ಟರ್ ಪರೀಕ್ಷೆಗಳ ಬಗ್ಗೆ ಕ್ರಮಕೈಗೊಳ್ಳಲು ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಿದೆ. ಶೀಘ್ರವೇ ಶಾಲಾ, ಕಾಲೇಜು ಆರಂಭಿಸುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

ಶಾಲಾ-ಕಾಲೇಜುಗಳಲ್ಲಿ ಸಾಮಾಜಿಕ ಅಂತರ ಬಹುಮುಖ್ಯವಾಗಿದ್ದು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಯಮಗಳನ್ನು ಸಿದ್ಧಪಡಿಸಲಾಗುತ್ತಿದೆ. ಕೇಂದ್ರ ಸರ್ಕಾರ ಮಾರ್ಗಸೂಚಿ ಸಿದ್ಧಪಡಿಸುತ್ತಿದ್ದು, ಶೀಘ್ರವೇ ಶಾಲಾ ಕಾಲೇಜು ಆರಂಭಕ್ಕೆ ಕ್ರಮಕೈಗೊಳ್ಳಲಾಗುತ್ತಿದೆ. ಅಲ್ಲದೇ, ಮುಂದೂಡಿಕೆಯಾದ ಪರೀಕ್ಷೆಗಳನ್ನು ನಡೆಸುವ ಕುರಿತಾಗಿಯೂ ಮಾರ್ಗಸೂಚಿ ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಲಾಗಿದೆ.

READ ALSO