ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

ಧರ್ಮಸ್ಥಳ : ( ಆಗಸ್ಟ್ 14) ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ -2 ,ಶಾಲೆಯಲ್ಲಿ “ಆಟಿಡೊಂಜಿ ದಿನ” ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಯುತ ಕೆ .ನಂದ ಇವರು ತುಳು ಸಂಪ್ರದಾಯದಂತೆ ಕಲಸೆಯಲ್ಲಿ ತೆಂಗಿನ ಮರದ ಹೊಂಬಾಳೆಯನ್ನು ಅರಳಿಸುವ ಮೂಲಕ ಚಾಲನೆ ನೀಡಿ, ಶುಭವನ್ನು ಹಾರೈಸಿದರು. ವೇದಿಕೆಯಲ್ಲಿದ ಗಣ್ಯರು ಚೆನ್ನೆ ಮಣೆಯ ಆಟದ ಮೂಲಕ ಚಾಲನೆ ನೀಡಿದರು.

ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿ ಯಾಗಿ ನಮ್ಮ ಶಾಲೆಯ ಎಸ್ ಡಿ ಎಂ ಸಿ ಯ ಸದಸ್ಯರಾದ ಶ್ರೀಯುತ ರೂಪೇಶ್.ಕೆ ಇವರು “ಆಟಿಡೊಂಜಿ ದಿನ”ದ ವಿಶೇಷತೆ ನ್ನು ಮಕ್ಕಳಿಗೆ ತಿಳಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಶ್ರೀಯುತ ಮನೋಹರ್ ರಾವ್ ಎಸ್. ಡಿ .ಎಂ. ಸಿ . ಯ, ಉಪಾಧ್ಯಕ್ಷೆ ಶ್ರೀಮತಿ ಹೇಮಲತಾ ಮತ್ತು ಸರ್ವ ಸದಸ್ಯರು,ಶಾಲಾ ಶಿಕ್ಷಕ ವೃಂದದವರು, ಅಕ್ಷರದಾಸೋಹ ಸಿಬ್ಬಂದಿ ಪೋಷಕ ವೃಂದ,ಶಾಲೆಯ ಮಕ್ಕಳು ಉಪಸ್ಥಿತರಿದ್ದರು.

ತುಳು ಹಾಡುಗಳಿಗೆ ಮಕ್ಕಳು ನೃತ್ಯವನ್ನು ಮಾಡಿ ಮನೋರಂಜಿಸಿದರು. ಪೋಷಕರ ಸಹ ಕಾರದಿಂದ 38 ಬಗೆಯ ಆಟಿ ತಿಂಗಳಲ್ಲಿ ಮಾಡುವ ವಿಶೇಷ ಖಾದ್ಯಗಳನ್ನು ,ಹಳೆಯ ಕಾಲದ ವಸ್ತುಗಳು ಜೊತೆಗೆ ಗಿಡಮೂಲಿಕೆಗಳ ಪ್ರದರ್ಶನವು ಈ ಕಾರ್ಯ ಕ್ರಮದ ವಿಶೇಷ ಆಕರ್ಷಣೆ ಯಾಗಿತ್ತು.ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್ ಸ್ವಾಗತಿಸಿ, ಅಥಿತಿ ಶಿಕ್ಷಕಿ ಶ್ರೀಮತಿ ಭವ್ಯ ವಂದಿಸಿ, ಸಹ ಶಿಕ್ಷಕಿ ಶ್ರೀಮತಿ ಹೇಮಲತಾ ಕಾರ್ಯಕ್ರಮವನ್ನು ನಿರೂಪಿಸಿದರು.

Spread the love
  • Related Posts

    ಉತ್ತರಾಖಂಡದ ಜೋಶಿಮಠ ಸಮೀಪದಲ್ಲಿ ಹೆಲಿಕಾಪ್ಟರ್ ಪತನ ಕರ್ನಾಟಕದ ಐವರು ಸೇರಿದಂತೆ ದೆಹಲಿ ಮೂಲದ ಪೈಲಟ್ ಸಾವು

    ಉತ್ತರಾಖಂಡದ ಜೋಶಿಮಠ ಸಮೀಪ ಶುಕ್ರವಾರ ಸಂಭವಿಸಿದ ಭೀಕರ ಹೆಲಿಕಾಪ್ಟರ್ ಅಪಘಾತದಲ್ಲಿ ಪೈಲಟ್ ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ. ಬದರಿನಾಥ್‌ನಿಂದ ಡೆಹ್ರಾಡೂನ್‌ಗೆ ತೆರಳುತ್ತಿದ್ದ ‘ಟ್ರಾನ್ಸ್ ಭಾರತ್ ಏವಿಯೇಷನ್’ ಸಂಸ್ಥೆಯ ಹೆಲಿಕಾಪ್ಟರ್ ಪತನಗೊಂಡಿದ್ದು, ಮೃತರ ಪೈಕಿ ಐವರು ಬೆಂಗಳೂರಿನವರಾಗಿದ್ದಾರೆ. ಮೃತರನ್ನು ದೆಹಲಿ ಮೂಲದ ಪೈಲಟ್…

    Spread the love

    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    ನವದೆಹಲಿ: ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅಧಿಕೃತ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಹಾಲಿ ರಾಜ್ಯಪಾಲರಾಗಿದ್ದ ಥಾವರ್‌ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿಯು ತೆರೆಕಂಡಿದ್ದು, ರಾಜ್ಯ ರಾಜಭವನಕ್ಕೆ ಹೊಸ ಮುಖ್ಯಸ್ಥರ ಆಗಮನವಾಗಲಿದೆ. ಕರ್ನಾಟಕ ಸೇರಿದಂತೆ…

    Spread the love

    You Missed

    ಉತ್ತರಾಖಂಡದ ಜೋಶಿಮಠ ಸಮೀಪದಲ್ಲಿ ಹೆಲಿಕಾಪ್ಟರ್ ಪತನ ಕರ್ನಾಟಕದ ಐವರು ಸೇರಿದಂತೆ ದೆಹಲಿ ಮೂಲದ ಪೈಲಟ್ ಸಾವು

    • By admin
    • October 30, 2026
    • 6 views
    ಉತ್ತರಾಖಂಡದ ಜೋಶಿಮಠ ಸಮೀಪದಲ್ಲಿ ಹೆಲಿಕಾಪ್ಟರ್ ಪತನ ಕರ್ನಾಟಕದ ಐವರು ಸೇರಿದಂತೆ ದೆಹಲಿ ಮೂಲದ ಪೈಲಟ್ ಸಾವು

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅ. 22ರವರೆಗೆ ದಸರಾ ರಜೆ ವಿಸ್ತರಣೆ!

    • By admin
    • October 21, 2026
    • 13 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅ. 22ರವರೆಗೆ ದಸರಾ ರಜೆ ವಿಸ್ತರಣೆ!

    ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು: ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು

    • By admin
    • October 15, 2026
    • 10 views
    ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನಿಂದ ಅಕ್ರಮವಾಗಿ ಮರ ಕಡಿದು ದಾಸ್ತಾನು:   ನಾವೂರು ನಿವಾಸಿ ಪ್ರಮೋದ್ ಸಾಲ್ಯಾನ್ ವಿರುದ್ದ ಪ್ರಕರಣ ದಾಖಲು

    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    • By admin
    • October 12, 2026
    • 10 views
    ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ, ರಾಜ್ಯಕ್ಕೆ ಡಾ.ಸುಧಾ ಯಾದವ್ ನೇಮಕ

    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    • By admin
    • October 11, 2026
    • 13 views
    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    • By admin
    • October 10, 2026
    • 14 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’