ಕರಾವಳಿಯಲ್ಲಿ ಗಾಳಿ ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ, ಯಲ್ಲೋ ಅಲರ್ಟ್ ಘೋಷಣೆ

ಮಂಗಳೂರು: ಅರಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪರಿಣಾಮ ಗಾಳಿ ಸಹಿತ ಮಳೆಯಾಗುವಸಾಧ್ಯತೆಯಿದ್ದು ಭಾರತೀಯ ಹವಾಮಾನ ಇಲಾಖೆಯು ಕರಾವಳಿಯಲ್ಲಿ ಇಂದು ಯಲ್ಲೋ ಅಲರ್ಟ್‌ ಘೋಷಿಸಿದೆ.

ಕರಾವಳಿ ಭಾಗದಲ್ಲಿ 64.5 ಮಿ.ಮೀ.ನಿಂದ 115.5 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆಯಿದ್ದು, ಗಾಳಿ ಮತ್ತು ಗುಡುಗು ಕೂಡ ಇರಲಿದೆ ಎಂದು ಹವಾಮಾನ ಇಲಾಖೆಯು ಸೂಚಿಸಿದೆ. ಕಳೆದ ಕೆಲ ದಿನಗಳಿಂದ ಕರಾವಳಿ ಭಾಗದ ಅಲ್ಲಲ್ಲಿ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಬಿರುಸು ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

READ ALSO

ಕರಾವಳಿಯಲ್ಲಿ ಸೆಕೆ ಮತ್ತು ಬಿಸಿಲಿನಿಂದ ಕೂಡಿದ ವಾತಾವರಣವಿದ್ದು ಭಾರತೀಯ ಹವಾಮಾನ ಇಲಾಖೆಯ ಅಂಕಿ – ಅಂಶದಂತೆ ಮಂಗಳವಾರದಂದು ಪಣಂಬೂರಿನಲ್ಲಿ 36 ಡಿ.ಸೆ. ಗರಿಷ್ಠ ಮತ್ತು 27.2 ಡಿ.ಸೆ. ಕನಿಷ್ಠ ಉಷ್ಣಾಂಶ ದಾಖಲಾಗಿತ್ತು.

ಗುರುವಾರ ಬೆಳಗ್ಗಿನವರೆಗೆ ದಕ್ಷಿಣ ಒಳನಾಡಿನ ಹಲವೆಡೆ, ಕರಾವಳಿಯ ಕೆಲವೆಡೆ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಕೇಂದ್ರ ತಿಳಿಸಿದೆ.