ಪರಿಸರ ನಮ್ಮ‌ ಜೀವನದ ಅವಿಭಾಜ್ಯ ಅಂಗ, ಪರಿಸರ ಉಳಿಸಿ ಮಾನವ ಬದುಕನ್ನು ಹಸಿರಾಗಿಸೋಣ: ಪ್ರಕಾಶ್ ಕುಮಾರ್ ಸಲಹೆ

ಶಿಡ್ಲಘಟ್ಟ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ಧಿ ಯೋಜನೆಯ ಜ್ಞಾನ ಜ್ಯೋತಿ ಜ್ಞಾನವಿಕಾಸ ಕೇಂದ್ರದ ಸದಸ್ಯರಿಂದ ಶಿಡ್ಲಘಟ್ಟ ತಾಲೂಕಿನ ಬಸವಾಪಟ್ಟಣ ಸಾಸುರಾಯ ದೇವಸ್ಥಾನದ ಆವರಣದಲ್ಲಿ ಸಸಿ ನಾಟಿ ಕಾರ್ಯಕ್ರಮವನ್ನು ನಡೆಸಲಾಯಿತು.

ಯೋಜನಾಧಿಕಾರಿ ಪ್ರಕಾಶ್ ಕುಮಾರ್ ರವರು ಮಾತನಾಡುತ್ತಾ ಪರಿಸರ ನಮ್ಮ‌ ಜೀವನದ ಅವಿಭಾಜ್ಯ ಅಂಗ. ಪರಿಸರವಿಲ್ಲದೆ ಮಾನವನಿಲ್ಲ ಎಂಬ ನಿತ್ಯ ಸತ್ಯವನ್ನು ನಾವಿಂದು‌ ನಮ್ಮ ಜೀವನದ ಗುರಿಯನ್ನಾಗಿಸಿಕೊಂಡು ಪರಿಸರ ಸಂರಕ್ಷಣೆಯತ್ತ ಮುನ್ನಡೆಯೋಣ. ವೇಗದ ಬದುಕಿನಲ್ಲಿ ಪರಿಸರ ಕಡೆಗಣಿಸುತ್ತಿರುವ ಮಾನವನ ಜೀವನ ಶೈಲಿ ಮುಂದೊಂದು ದಿನ ಅವನಿಗೇ ಮುಳ್ಳಾಗಬಹುದು, ಮನುಷ್ಯ ಪರಿಸರದ ಮೇಲೆ ನಡೆಸುತ್ತಿರುವ ದೌರ್ಜನ್ಯ ನಿಲ್ಲಿಸದಿದ್ದರೆ ಜೀವಿಗಳ ಆರೋಗ್ಯದ ಮೇಲೆ ಪ್ರತಿಕೂಲ ಪ್ರಭಾವ ಉಂಟಾಗುತ್ತದೆ, ಪರಿಸರ ಉಳಿಸಿ ಮಾನವ ಬದುಕನ್ನು ಹಸಿರಾಗಿಸೋಣ ಎಂದು ಸಲಹೆ ನೀಡಿದರು.

READ ALSO

ಜ್ಞಾನವಿಕಾಸ ಕೇಂದ್ರದ ಸದಸ್ಯರಿಗೆ ಆರೋಗ್ಯ ಸಹಾಯಕಿ ನೀಲಮ್ಮರವರು ಕೊರೋನಾ ಮುಂಜಾಗ್ರತೆಯ ಬಗ್ಗೆ ಅರಿವು ಮೂಡಿಸಿದರು.

ಈ ಸಂಧರ್ಭದಲ್ಲಿ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ಪವಿತ್ರ ರವರು ಹಾಗೂ ಗ್ರಾಮ ಪಂಚಾಯತ್ ಸದಸ್ಯ ಬಾಲಣ್ಣ ಜ್ಞಾನವಿಕಾಸ ಸಮನ್ವಯಾಧಿಕಾರಿ ಲಕ್ಷ್ಮಿ ಸೇವಾಪ್ರತಿನಿಧಿ ಚೈತ್ರಾ ಉಪಸ್ಥಿತರಿದ್ದರು.