ಕ್ವಾರಂಟೈನ್‌ ದಿನಗಳನ್ನು ವ್ಯರ್ಥ ಮಾಡದೆ ಶಾಲಾ ಪರಿಸರವನ್ನು ಸ್ವಚ್ಛತೆ ಮಾಡಿ ರಾಜ್ಯಕ್ಕೆ ಮಾದರಿಯಾದ ಮುಂಬೈ ಕನ್ನಡಿಗರು

ಬೆಳ್ತಂಗಡಿ: ಮುಂಬೈನಿಂದ ಬಂದು ಮರೋಡಿ ಗ್ರಾಮದ ಮೂರು ಶಾಲೆಗಳಲ್ಲಿ ಕ್ವಾರಂಟೈನ್‌ನಲ್ಲಿದ್ದ ಸುಮಾರು 64 ಮಂದಿಗೆ ಶಾಸಕ ಹರೀಶ್‌ ಪೂಂಜ ಅವರು ಭಾನುವಾರ ತೆಂಗಿನ ಸಸಿಗಳನ್ನು ವಿತರಿಸಿ, ಬೀಳ್ಕೊಟ್ಟರು.

ಕೂಕ್ರಬೆಟ್ಟು ಸರ್ಕಾರಿ ಶಾಲೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಹರೀಶ್‌ ಪೂಂಜ ಮಾತನಾಡಿ, ‘ಈ ಶಾಲೆಯಲ್ಲಿ ಕ್ವಾರಂಟೈನ್‌ನಲ್ಲಿದ್ದ 25 ಮಂದಿ ಶಾಲೆಗೆ ಹೊಸ ರೂಪವನ್ನು ಕೊಟ್ಟಿದ್ದಾರೆ. ಕ್ವಾರಂಟೈನ್‌ ಅವಧಿಯ ದಿನಗಳನ್ನು ವ್ಯರ್ಥ ಮಾಡದೆ ಶಾಲಾ ಪರಿಸರವನ್ನು ಸ್ವಚ್ಛತೆ ಮಾಡಿ ರಾಜ್ಯಕ್ಕೆ ಮಾದರಿಯಾಗಿದ್ದಾರೆ. ಉದ್ಯೋಗ ಅರಸಿ ಪರವೂರಿಗೆ ಹೋದವರು ಸಂಕಷ್ಟಕ್ಕೆ ಸಿಲುಕಿದಾಗ ಅವರಿಗೆ ಸ್ಪಂದಿಸುವುದು ಊರಿನವರು ಕರ್ತವ್ಯ. ಈ ನಿಟ್ಟಿನಲ್ಲಿ ಇಲ್ಲಿನ ಗ್ರಾಮಸ್ಥರಿಗೆ ವಿಶೇಷ ಅಭಿನಂದನೆ ಸಲ್ಲಿಸುತ್ತೇನೆ’ ಎಂದು ಹೇಳಿದರು.

ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್‌ ಮಾತನಾಡಿ, ‘ಮುಂಬೈನಲ್ಲಿ ಒಂದೇ ಕುಟುಂಬದಂತೆ ಇದ್ದ 25 ಮಂದಿ ಕೂಕ್ರಬೆಟ್ಟು ಶಾಲೆಗೆ ಬಸ್‌ನಲ್ಲಿ ಬಂದು 14 ದಿನ ಕ್ವಾರಂಟೈನ್‌ ಮುಗಿಸಿದ್ದಾರೆ. ಅವರು ಕೂಕ್ರಬೆಟ್ಟು ಶಾಲೆಯಲ್ಲಿ ಶ್ರಮದಾನದ ಮೂಲಕ ಶಾಲೆಗೆ ವಿಶೇಷ ಮೆರುಗು ನೀಡಿದ್ದಾರೆ. ದಾನಿಗಳ ಸಹಕಾರದಿಂದ ಅವರಿಗೆ ಊಟೋಪಚಾರ ನೀಡಲಾಗಿದೆ. ಮರೋಡಿ ಗ್ರಾಮದಲ್ಲಿ ಕ್ವಾರಂಟೈನ್‌ನಲ್ಲಿದ್ದ ಎಲ್ಲರ ಕೋವಿಡ್‌ ವರದಿ ನೆಗೆಟಿವ್‌ ಬಂದಿದೆ’ ಎಂದರು.

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ, ಧಾರ್ಮಿಕ ಪರಿಷತ್‌ ಸದಸ್ಯ ದೇವೇಂದ್ರ ಹೆಗ್ಡೆ ಕೊಕ್ರಾಡಿ ಮಾತನಾಡಿ, ‘ತುಳುನಾಡಿನ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಮುಂಬೈ ಕನ್ನಡಿಗರ ಕೊಡುಗೆ ಅಪಾರವಾದುದು. ಕೋವಿಡ್‌ನಿಂದಾಗಿ ಮುಂಬೈನಲ್ಲಿ ಸಂಕಷ್ಟ ಎದುರಾದಾಗ ನಮ್ಮವರ ಕಷ್ಟಕ್ಕೆ ಸ್ಪಂದಿಸುವುದು ಮಾನವೀಯತೆ’ ಎಂದು ಹೇಳಿದರು.

ಮರೋಡಿ ಶ್ರೀ ಆದಿಶಕ್ತಿ ಸೇವಾ ಸಮಿತಿಯ ಅಧ್ಯಕ್ಷ ರತ್ನಾಕರ ಬುಣ್ಣಾನ್‌, ಕೂಕ್ರಬೆಟ್ಟು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಜುಪೂಜಾರಿ, ಮುಖ್ಯಶಿಕ್ಷಕಿ ಸುಫಲಾ, ಮರೋಡಿ ಗ್ರಾಮ ಪಂಚಾಯಿತಿ ಪಿಡಿಒ ಆಶಾಲತಾ, ಸದಸ್ಯರಾದ ಉಮೇಶ್‌ ಪೂಜಾರಿ, ಪದ್ಮಶ್ರೀ ಜೈನ್‌, ಶಿವಾನಂದ ಆಚಾರ್ಯ, ಬಾರ್ಯ ಸಿ.ಎ. ಬ್ಯಾಂಕ್‌ ಅಧ್ಯಕ್ಷ ಸುಬ್ರಹ್ಮಣ್ಯ ಗೌಡ, ಸದಾನಂದ ಉಂಗಿಲಬೈಲು, ಮಾಜಿ ಅಧ್ಯಕ್ಷ ಬಾಲಕೃಷ್ಣ ಬಂಗೇರ, ಮಹೇಶ್‌ ಪೂಜಾರಿ ಮರೋಡಿ ಮತ್ತಿತರರು ಉಪಸ್ಥಿತರಿದ್ದರು.

Spread the love
  • Related Posts

    ಲಯನ್ಸ್ ಇಂಟರ್ ನ್ಯಾಶನಲ್, ಲಯನ್ಸ್ ಕ್ಲಬ್ ಮತ್ತು ಲಿಯೋಕ್ಲಬ್ ಸಕಲೇಶಪುರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸಕಲೇಶಪುರ, ಕೆ.ಎಂ.ಸಿ ಆಸ್ಪತ್ರೆ ಮಂಗಳೂರು, ಸಂಸ್ಕೃತಿ ಕಾರ್ಡಿಯಾಕ್ ಸೆಂಟರ್ ಇದರ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಸಕಲೇಶಪುರ: ಲಯನ್ಸ್ ಇಂಟರ್ ನ್ಯಾಶನಲ್, ಲಯನ್ಸ್ ಕ್ಲಬ್ ಮತ್ತು ಲಿಯೋಕ್ಲಬ್ ಸಕಲೇಶಪುರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸಕಲೇಶಪುರ, ಕೆ.ಎಂ.ಸಿ ಆಸ್ಪತ್ರೆ ಮಂಗಳೂರು, ಸಂಸ್ಕೃತಿ ಕಾರ್ಡಿಯಾಕ್ ಸೆಂಟರ್ ಹಾಸನ ಇದರ ಸಹಯೋಗದೊಂದಿಗೆ ಲಯನ್ಸ್ ಸೇವಾ ಮಂದಿರದಲ್ಲಿ…

    Spread the love

    ಕನ್ಯಾಡಿ ಸೇವಾಭಾರತಿಯಿಂದ 7 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ:

    ಸೌತಡ್ಕ : ಬೆಂಗಳೂರು ಅಸೋಸಿಯೇಷನ್ ಆಫ್ ಪೀಪಲ್ ವಿಥ್ ಡಿಸಬಿಲಿಟಿಯ ಸಹಕಾರದೊಂದಿಗೆ ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಗುರುತಿಸಲ್ಪಟ್ಟ ಬೆನ್ನುಹುರಿ ಅಪಘಾತಕ್ಕೊಳಗಾದ ಶಿಬಾಜೆಯ ಶ್ರೀ ಮೋಹನ್ ಪಿಬಿ,ಶ್ರೀ ಮಹೇಶ್ ಗುತ್ತಿಗಾರು, ನಿಡ್ಲೆಯ ಶ್ರೀ ಚಂದ್ರಶೇಖರ್ ಭಟ್, ಪುತ್ತೂರಿನ ಶ್ರೀಮತಿ ಜೈನಾಬಿ, ಬದಿಯಡ್ಕದ ಶ್ರೀ…

    Spread the love

    You Missed

    ಲಯನ್ಸ್ ಇಂಟರ್ ನ್ಯಾಶನಲ್, ಲಯನ್ಸ್ ಕ್ಲಬ್ ಮತ್ತು ಲಿಯೋಕ್ಲಬ್ ಸಕಲೇಶಪುರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸಕಲೇಶಪುರ, ಕೆ.ಎಂ.ಸಿ ಆಸ್ಪತ್ರೆ ಮಂಗಳೂರು, ಸಂಸ್ಕೃತಿ ಕಾರ್ಡಿಯಾಕ್ ಸೆಂಟರ್ ಇದರ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    • By admin
    • October 25, 2025
    • 12 views
    ಲಯನ್ಸ್ ಇಂಟರ್ ನ್ಯಾಶನಲ್, ಲಯನ್ಸ್ ಕ್ಲಬ್ ಮತ್ತು ಲಿಯೋಕ್ಲಬ್ ಸಕಲೇಶಪುರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸಕಲೇಶಪುರ, ಕೆ.ಎಂ.ಸಿ ಆಸ್ಪತ್ರೆ ಮಂಗಳೂರು, ಸಂಸ್ಕೃತಿ ಕಾರ್ಡಿಯಾಕ್ ಸೆಂಟರ್ ಇದರ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಕನ್ಯಾಡಿ ಸೇವಾಭಾರತಿಯಿಂದ 7 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ:

    • By admin
    • October 25, 2025
    • 11 views
    ಕನ್ಯಾಡಿ ಸೇವಾಭಾರತಿಯಿಂದ 7 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ:

    ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ (ರಿ.), ವತಿಯಿಂದ ಸನ್ಮಾನ

    • By admin
    • October 25, 2025
    • 16 views
    ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ (ರಿ.), ವತಿಯಿಂದ ಸನ್ಮಾನ

    ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳವು ನಾಡಿನ ಪವಿತ್ರ ಹಾಗೂ ಪುಣ್ಯಕ್ಷೇತ್ರ, ಹೆಗ್ಗಡೆಯವರು ಮಾತೃಹೃದಯದಿಂದ ಮಾಡುವ ಸಮಾಜ ಸೇವೆ ಅನನ್ಯ ಮತ್ತು ಅನುಪಮವಾಗಿದೆ

    • By admin
    • October 24, 2025
    • 64 views
    ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳವು ನಾಡಿನ ಪವಿತ್ರ ಹಾಗೂ ಪುಣ್ಯಕ್ಷೇತ್ರ, ಹೆಗ್ಗಡೆಯವರು ಮಾತೃಹೃದಯದಿಂದ ಮಾಡುವ ಸಮಾಜ ಸೇವೆ ಅನನ್ಯ ಮತ್ತು ಅನುಪಮವಾಗಿದೆ

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    • By admin
    • October 23, 2025
    • 30 views
    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    • By admin
    • October 23, 2025
    • 32 views
    ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ