ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿ ಎಂಟು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ರವಿವಾರ ಮತ್ತು ಸೋಮವಾರ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಅರಬ್ಬಿ ಸಮುದ್ರದಲ್ಲಿ ಚಂಡಮಾರುವೆದ್ದಿದ್ದು, ಭಾರಿ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಈ ಹಿನ್ನಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು. ಮೀನುಗಾರಿಕೆಗೆ ತೆರಳಿದ ಬೋಟ್ ಗಳು ಕೂಡಲೇ ದಡಕ್ಕೆ ಮರಳಬೇಕು ಎಂದು ಸೂಚನೆ ನೀಡಲಾಗಿದೆ.