TRENDING
Next
Prev

ರಾಜ್ಯಕ್ಕೆ ಅಪ್ಪಳಿಸುತ್ತಾ “ನಿಸರ್ಗ ಚಂಡಮಾರುತ”!! ರಾಜ್ಯದ ಹಲವೆಡೆ ಆರೆಂಜ್ ಅಲರ್ಟ್

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ನಿನ್ನೆ ವಾಯುಭಾರ ಕುಸಿತವಾಗಿದ್ದು, ಇವತ್ತು ಗಾಳಿಯ ವೇಗ ಹೆಚ್ಚಾಗಿದೆ. ನಾಳೆ ಬೆಳಗ್ಗೆ ಚಂಡಮಾರುತವಾಗಿ ಪರಿವರ್ತನೆ ಆಗುವ ಸಾಧ್ಯತೆ ಇದೆ. ಈ ‘ನಿಸರ್ಗ ಚಂಡಮಾರುತ’ ರಾಜ್ಯದ ಮೇಲೂ ಪ್ರಭಾವ ಬೀರಿ ಬಳಿಕ ಉತ್ತರದ ರಾಜ್ಯಗಳಾದ ಗುಜರಾತ್, ಮಹಾರಾಷ್ಟ್ರದ ಕಡೆ ಚಲಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಪ್ರಾರಂಭವಾಗಿ ನಾಳೆಯಿಂದ ಎಲ್ಲೆಡೆ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.

READ ALSO