ಕರಾವಳಿಯ ಕಡಲತಡಿಯಲ್ಲಿ ಆರ್ಭಟಿಸುತ್ತಿದೆ ಕೊರೋನಾ ‘ಮಹಾ’ ಮಾರಿ! ಕೃಷ್ಣನಗರಿಯಲ್ಲಿ ಇಂದು 210ಜನರಲ್ಲಿ ಸೋಂಕು ದೃಢ

ಉಡುಪಿ: ಕರಾವಳಿಯ ಪಾಲಿಗೆ ಇಂದು ಕರಾಳ ಮಂಗಳವಾರವಾಗಿದೆ ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ ಬರೋಬ್ಬರಿ 210 ಜನರಿಗೆ ಸೋಂಕು ದೃಢವಾಗುವ ಮೂಲಕ ಕೃಷ್ಣನಗರಿಯನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ.

ಕೆಲ ದಿನಗಳ ಹಿಂದೆ ಯಾವುದೇ ಸಕ್ರಿಯ ಪ್ರಕರಣಗಳಿಲ್ಲದೆ ಗ್ರೀನ್ ಜೋನ್ ನಲ್ಲಿ ಸೇಫ್ ಆಗಿದ್ದ ಉಡುಪಿ ಜಿಲ್ಲೆ ಇದೀಗ ಅತೀ ಹೆಚ್ಚು ಕೊರೋನಾ ಸೋಂಕಿತರ ಹೊಂದಿದೆ .

READ ALSO

ಮಹಾರಾಷ್ಟ್ರದಿಂದ ಬಂದ ಪ್ರಯಾಣಿಕರಲ್ಲೇ ಹೆಚ್ಚಿನ ಸೋಂಕು ಕಾಣಿಸಿಕೊಳ್ಳುತ್ತಿರುವ ಕಾರಣ, ಮಹಾರಾಷ್ಟ್ರ ದಿಂದ ಬಂದವರ ಮೇಲೆ ತೀವ್ರ ನಿಗಾ ವಹಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಆರ್. ಅಶೋಕ್ ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಸೋಂಕಿನ ಪ್ರಕರಣಗಳು ದಿಡೀರನೆ ಏರಿಕೆ ಕಾಣುತ್ತಿದ್ದು ಜಿಲ್ಲೆಯಲ್ಲಿ ಈವರೆಗೆ 260 ಕೋವಿಡ್19 ಸೋಂಕು ಪ್ರಕರಣಗಳು ದೃಢವಾಗಿತ್ತು. ಇಂದಿನ 210 ಹೊಸ ಪ್ರಕರಣಗಳು ಕಾರಣದಿಂದ ಜಿಲ್ಲೆಯ ಸೋಂಕಿತರ ಸಂಖ್ಯೆ 470ಕ್ಕೆ ಏರಿಕೆ ಕಂಡಂತಾಗಿದೆ.