ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆಯಲ್ಲಿ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಗೆ ಚಾಲನೆ

ಬೆಂಗಳೂರು: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಬಿ ಜಿ ನಗರದ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ 1 ಕೋಟಿ ವೆಚ್ಚದಲ್ಲಿ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ನ್ನು ಪ್ರಾರಂಭಿಸಲಾಯಿತು.

ಉದ್ಘಾಟನೆ ಕಾರ್ಯಕ್ರಮವು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ ನೆರವೇರಿತು. ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ನಾರಾಯಣಗೌಡರವರು, ಶಾಸಕರ ಶ್ರೀ ಸುರೇಶ್ ಗೌಡರವರು, ಪರಿಷತ್ ಸದಸ್ಯರಾದ ಶ್ರೀ ಅಪ್ಪಾಜಿ ಗೌಡರವರು, ಜಿಲ್ಲೆಯ ಅಧಿಕಾರಿಗಳು ಉಪಸ್ಥಿತರಿದ್ದರು.

READ ALSO

ಶ್ರೀ ಮಠದ ಆವರಣದಲ್ಲಿ ಪೂಜ್ಯ ಮಹಾ ಸ್ವಾಮೀಜಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಹಾಗೂ ಸಚಿವರು, ಶಾಸಕರು, ಪರಿಷತ್ ಸದಸ್ಯರುಗಳ ಉಪಸ್ಥಿತಿಯಲ್ಲಿ ಗಿಡಗಳನ್ನು ನೆಡಲಾಯಿತು.