ಗ್ರಹ ರಕ್ಷಕ ದಳದ ಸಿಬ್ಬಂದಿಗಳ ಪರ ಧ್ವನಿಯಾದ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ

ಬೆಂಗಳೂರು: ಕೋವಿಡ್-19 ಸಂದರ್ಭದಲ್ಲಿ ಪೊಲೀಸ್ ಇಲಾಖೆಗೆ ಭುಜಕ್ಕೆ ಭುಜ ಕೊಟ್ಟು ದುಡಿದ ಗ್ರಹ ರಕ್ಷಕ ದಳದ ಸಿಬ್ಬಂದಿಗಳನ್ನು ಬಿಡುಗಡೆಗೊಳಿಸಿ ನೀಡಿದ ಆದೇಶವನ್ನು ರದ್ದುಗೊಳಿಸಲು ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರಲ್ಲಿ ಬೆಳ್ತಂಗಡಿಯ ಜನಪ್ರಿಯ ಶಾಸಕ ಹರೀಶ್ ಪೂಂಜಾ ಮನವಿ ಮಾಡಿದರು.

ಕೇವಲ ಕೊರೊನ ಸಂದರ್ಭದಲ್ಲಿ ಮಾತ್ರಾ ಅಲ್ಲ, ಬಂದೋಬಸ್ತ್, ಸಂಚಾರ ನಿಯಂತ್ರಣ, ಅತಿವೃಷ್ಟಿ ಹೀಗೆ ಪ್ರತಿ ವಿಪತ್ತಿನ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಜೊತೆ ಕೆಲಸ ಮಾಡುವ ಗ್ರಹರಕ್ಷಕ ಇಲಾಖೆಯ ಸಿಬ್ಬಂದಿಗಳನ್ನು ಆಯಾಯ ಇಲಾಖೆಗಳಲ್ಲಿಯೇ ಮುಂದುವರಿಸಬೇಕು ಎಂದು ನಮ್ಮ ಜನಪ್ರಿಯ ಶಾಸಕ ಶ್ರೀ ಹರೀಶ್ ಪೂಂಜಾ ಮನವಿ ಮಾಡಿದರು.

READ ALSO