ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜರವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ವೈ 3ಸಾವಿರಕ್ಕೂ ಹೆಚ್ಚು ಗೃಹರಕ್ಷಕ ದಳದ ಸಿಬ್ಬಂದಿಯನ್ನು ಮತ್ತೆ ಸೇವೆಯಲ್ಲಿ ಮುಂದುವರೆಸಲು ಸೂಚನೆ

ಬೆಂಗಳೂರು: ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ರವರು ಗೃಹರಕ್ಷಕ ದಳದ ಸಿಬ್ಬಂದಿಯನ್ನು ಕೆಲಸದಿಂದ ತೆಗೆಯದೆ ಅವರನ್ನು ಮತ್ತೆ ಸೇವೆಯಲ್ಲಿ ಮುಂದುವರೆಸಿ ಎಂಬ ಮನವಿಯನ್ನು ಮುಖ್ಯಮಂತ್ರಿಯವರಿಗೆ ನೀಡಿದ ಬೆನ್ನಲ್ಲೇ ಶಾಸಕರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರು, ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿರುವ ಮೂರು ಸಾವಿರಕ್ಕೂ ಹೆಚ್ಚು ಗೃಹರಕ್ಷಕ ದಳದ ಸಿಬ್ಬಂದಿಯನ್ನು ಮತ್ತೆ ಸೇವೆಯಲ್ಲಿ ಮುಂದುವರಿಸಿ ವಿವಿಧ ಇಲಾಖೆಗಳಿಗೆ ನಿಯೋಜಿಸಲು ಹಾಗೂ ಮುಂದಿನ ದಿನಗಳಲ್ಲಿ ಖಾಸಗಿ ಸಂಸ್ಥೆಗಳಿಗೆ ಹೋಂ-ಗಾರ್ಡ್ ಗಳ ಸೇವೆಯನ್ನು ಒದಗಿಸುವ ಕುರಿತು ಕ್ರಮ ವಹಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಮುಂಗಾರು ಸಂದರ್ಭದಲ್ಲಿ 200 ಮಂದಿ ಎಸ್.ಡಿ.ಆರ್.ಎಫ್ ಸಿಬ್ಬಂದಿಗೆ ತರಬೇತಿ ಪ್ರಾರಂಭವಾಗಿದೆ. ಕೆಲವು ದಿನಗಳಲ್ಲಿ ಅವರನ್ನು ನಾಲ್ಕು ವಿಭಾಗಗಳಲ್ಲಿ ನಿಯೋಜಿಸಲು ಸಾಧ್ಯವಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ಗುರುವಾರ ಗೃಹ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿ
ಕೋವಿಡ್-19 ನಿಯಂತ್ರಣ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಕುರಿತು ಶ್ಲಾಘಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ಇಲಾಖೆಯ ಸುಧಾರಣೆಗೆ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದರು.

ರಾಜ್ಯದಲ್ಲಿ ಪೊಲೀಸ್ ಇಲಾಖೆಯು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ರಾಜ್ಯದಲ್ಲಿ ಬದಲಾದ ಸನ್ನಿವೇಶಗಳಲ್ಲಿ ಸಿಇಎನ್(ಸೈಬರ್ ಕ್ರೈಂ, ಎಕನಾಮಿಕ್ ಅಫೆನ್ಸ್ ಮತ್ತು ನಾರ್ಕೊಟಿಕ್ಸ್) ಠಾಣೆಗಳನ್ನು ಬಲಪಡಿಸಲು ಆದ್ಯತೆ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಅಪರಾಧಗಳನ್ನು ತ್ವರಿತವಾಗಿ ಪತ್ತೆ ಹಚ್ಚುವ ನಿಟ್ಟಿನಲ್ಲಿ ಫಾರೆನ್ಸಿಕ್ ಪ್ರಯೋಗಾಲಯಗಳನ್ನು ಬಲಪಡಿಸಲು ಹಾಗೂ
ತುರ್ತು ಸ್ಪಂದನೆ ವ್ಯವಸ್ಥೆ ಯೋಜನೆಯಡಿ ವಾಹನ ಖರೀದಿಗೆ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಗೃಹ ಇಲಾಖೆಯಡಿ ಬರುವ ಎಲ್ಲ ಇಲಾಖೆಗಳ ವಿವಿಧ ಮೂಲ ಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ವಸ್ತುಸ್ಥಿತಿ ಆಧರಿಸಿ, ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಪೊಲೀಸ್ ಮಹಾನಿರ್ದೇಶಕ ಮತ್ತು ಮಹಾನಿರೀಕ್ಷಕರಾದ ಪ್ರವೀಣ್ ಸೂದ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು

Spread the love
  • Related Posts

    ಹಿರಿಯ ಸಾಹಿತಿ, ಸಂಶೋಧಕ ಡಾ. ವ್ಯಾಸರಾವ್ ನಿಂಜೂರು ನಿಧನ

    ಮುಂಬೈ: ಕನ್ನಡ ಸಾಹಿತ್ಯ ಲೋಕದ ಹಿರಿಯ ಸಾಹಿತಿ, ಸಂಶೋಧಕ ಹಾಗೂ ಚಿಂತಕ ಡಾ. ವ್ಯಾಸರಾವ್ ನಿಂಜೂರು (86) ಅವರು ನವೆಂಬರ್ 3, 2026ರಂದು ಮುಂಬೈನಲ್ಲಿ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆಯ ತೆಂಕನಿಡಿಯೂರು ಮೂಲದವರಾಗಿದ್ದ ಡಾ. ವ್ಯಾಸರಾವ್ ನಿಂಜೂರು ಅವರು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ…

    Spread the love

    ಮಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ: ₹15.30 ಲಕ್ಷದ MDMA ಸಹಿತ ಬೆಳ್ತಂಗಡಿ ಮೂಲದ ಮಹಿಳೆ ಅರೆಸ್ಟ್!

    ಮಂಗಳೂರು: ಮಂಗಳೂರು ನಗರದಲ್ಲಿ ಮಾದಕ ವಸ್ತು ಪೂರೈಸುತ್ತಿದ್ದ ಆರೋಪದಡಿ ಬೆಳ್ತಂಗಡಿ ತಾಲೂಕಿನ ಲಾಯಿಲ ಗುರಿಂಗಾನದ ನಸೀಮಾ(42) ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ನ.1ರಂದು ಮಂಗಳೂರು ಉತ್ತರ ಪೊಲೀಸ್‌ ಠಾಣೆಯಲ್ಲಿ ವರದಿಯಾದ ಮಾದಕ ವಸ್ತು ಸೇವನೆ ಪ್ರಕರಣದ ಆರೋಪಿತರಿಗೆ ಮಾದಕ ವಸ್ತು ಪೂರೈಸುತ್ತಿದ್ದ ನಸೀಮಾ…

    Spread the love

    You Missed

    ಹಿರಿಯ ಸಾಹಿತಿ, ಸಂಶೋಧಕ ಡಾ. ವ್ಯಾಸರಾವ್ ನಿಂಜೂರು ನಿಧನ

    • By admin
    • November 3, 2026
    • 3 views
    ಹಿರಿಯ ಸಾಹಿತಿ, ಸಂಶೋಧಕ ಡಾ. ವ್ಯಾಸರಾವ್ ನಿಂಜೂರು ನಿಧನ

    ಮಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ: ₹15.30 ಲಕ್ಷದ MDMA ಸಹಿತ ಬೆಳ್ತಂಗಡಿ ಮೂಲದ ಮಹಿಳೆ ಅರೆಸ್ಟ್!

    • By admin
    • November 2, 2026
    • 5 views
    ಮಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ: ₹15.30 ಲಕ್ಷದ MDMA ಸಹಿತ ಬೆಳ್ತಂಗಡಿ ಮೂಲದ ಮಹಿಳೆ ಅರೆಸ್ಟ್!

    ಕಂಬಳದ ಸೊಬಗು, ಮೈಸೂರು ದಸರಾಗೆ ಹೊಸ ಮೆರುಗು ನೀಡಿದ ತುಳುನಾಡಿನ ಜನಪದ ಕ್ರೀಡೆ

    • By admin
    • November 1, 2026
    • 11 views

    ಬೆಳ್ತಂಗಡಿ ತಾಲೂಕಿನ 7ಮಂದಿಗೆ ಒಲಿದು ಬಂದ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    • By admin
    • November 1, 2026
    • 6 views
    ಬೆಳ್ತಂಗಡಿ ತಾಲೂಕಿನ 7ಮಂದಿಗೆ ಒಲಿದು ಬಂದ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಪತ್ರಕರ್ತ, ಶಿಕ್ಷಣ ಪ್ರೇಮಿ ಮನೋಹರ್ ಬಳಂಜರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    • By admin
    • October 31, 2026
    • 11 views
    ಪತ್ರಕರ್ತ, ಶಿಕ್ಷಣ ಪ್ರೇಮಿ ಮನೋಹರ್ ಬಳಂಜರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಉತ್ತರಾಖಂಡದ ಜೋಶಿಮಠ ಸಮೀಪದಲ್ಲಿ ಹೆಲಿಕಾಪ್ಟರ್ ಪತನ ಕರ್ನಾಟಕದ ಐವರು ಸೇರಿದಂತೆ ದೆಹಲಿ ಮೂಲದ ಪೈಲಟ್ ಸಾವು

    • By admin
    • October 30, 2026
    • 13 views
    ಉತ್ತರಾಖಂಡದ ಜೋಶಿಮಠ ಸಮೀಪದಲ್ಲಿ ಹೆಲಿಕಾಪ್ಟರ್ ಪತನ ಕರ್ನಾಟಕದ ಐವರು ಸೇರಿದಂತೆ ದೆಹಲಿ ಮೂಲದ ಪೈಲಟ್ ಸಾವು