ಹೊರ ರಾಜ್ಯದಿಂದ ಬರುವವರಿಗೆ ‘ಹೋಮ್ ಕ್ವಾರಂಟೈನ್ ಅವಧಿ’ ಹೆಚ್ಚಳ ಮಾಡಿ ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕ್ವಾರಂಟೈನ್ ಅವಧಿಯಲ್ಲಿನ ಸಡಿಲಿಕೆಯನ್ನು ಮಾರ್ಪಾಡು ಮಾಡಲಾಗಿದೆ.

ರಾಜ್ಯದಲ್ಲಿ ದಿನೇದಿನೇ ಸೋಂಕಿತರ ಸಂಖ್ಯೆ ಕೂಡ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಈ ಹಿಂದೆ ಇದ್ದ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಮತ್ತು 7 ದಿನ ಹೋಂ ಕ್ವಾರಂಟೈನ್ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ.

READ ALSO

7 ದಿನ ಸಾಂಸ್ಥಿಕ ಕ್ವಾರಂಟೈನ್, ಹಾಗೂ 14 ದಿನಗಳ ಹೋಂ ಕ್ವಾರಂಟೈನ್ ಕಡ್ಡಾಯವಾಗಿ ಮಾಡಬೇಕೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇನ್ನುಳಿದ ಆದೇಶವು ಈ ಹಿಂದಿನಂತೆ ಯಥಾಸ್ಥಿತಿಯಲ್ಲಿ ಮುಂದುವರಿಕೆಯಲ್ಲಿರುತ್ತದೆ ಎಂಬುದಾಗಿ ಆದೇಶಿಸಿದ್ದಾರೆ.