TRENDING
Next
Prev

ರಾಜ್ಯಸಭೆಗೆ ಕರಾವಳಿಯ ಉದ್ಯಮಿ ಪ್ರಕಾಶ್‌ ಶೆಟ್ಟಿ ಸಹಿತ ಮೂವರ ಹೆಸರು ಫೈನಲ್!ಚ

ಬೆಂಗಳೂರು: ಜೂನ್ 18ರಂದು ನಡೆಯಲಿರುವ ರಾಜ್ಯಸಭೆಯ ಕರ್ನಾಟಕದ 4 ಸ್ಥಾನಗಳಿಗೆ ಈಗಾಗಲೇ ಜೆಡಿಎಸ್ ನಿಂದ ಹೆಚ್ ಡಿ ದೇವೇಗೌಡರು, ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆ ಗೆಗೆ ಟಿಕೆಟ್ ಫೈನಲ್ ಮಾಡಲಾಗಿತ್ತು. ಇದೀಗ ರಾಜ್ಯ ಬಿಜೆಪಿ ಪಕ್ಷ ಕೂಡ ಮೂರು ಹೆಸರುಗಳನ್ನು ಫೈನಲ್ ಮಾಡಿದೆ. ಬಿಜೆಪಿಯಿಂದ ರಮೇಶ್ ಕತ್ತಿ, ಪ್ರಭಾಕರ್ ಕೋರೆ ಹಾಗೂ ಪ್ರಕಾಶ್ ಶೆಟ್ಟಿಗೆ ಟಿಕೆಟ್ ಫೈನಲ್ ಮಾಡಲಾಗಿದೆ.

ರಾಜ್ಯ ಬಿಜೆಪಿಯ ಕೋರ್ ಕಮಿಟಿ ಸಭೆ, ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆಯಿತು. ಈ ಸಭೆಯಲ್ಲಿ ರಾಜ್ಯ ಬಿಜೆಪಿಯಿಂದ ರಾಜ್ಯಸಭೆಗೆ 3 ಹೆಸರು ಫೈನಲ್ ಮಾಡಲಾಗಿದೆ.

READ ALSO

MRG ಗ್ರೂಪ್‌ನ ಅಧ್ಯಕ್ಷ, ಮಂಗಳೂರಿನ ಖ್ಯಾತ ಹೋಟೆಲ್ ಗಳಲ್ಲಿ ಒಂದಾದ ಗೋಲ್ಡ್ ಫಿಂಚ್ ನ ಮಾಲೀಕರಾದ ಕೊರಂಗ್ರಪಾಡಿ ಪ್ರಕಾಶ್‌ ಶೆಟ್ಟಿಯವರಿಗೆ ಟಿಕೆಟ್ ನೀಡಲಾಗಿದೆ.

ಉಮೇಶ್ ಕತ್ತಿ ಸಹೋದರ ರಮೇಶ್ ಕತ್ತಿಗೆ ರಾಜ್ಯ ಸಭಾ ಟಿಕೆಟ್ ನೀಡುವಂತೆ ಪಟ್ಟು ಹಿಡಿದಿದ್ದರು. ಅಲ್ಲದೇ ಬಂಡಾಯದ ಬಿಸಿಯನ್ನು ಕೂಡ ರಾಜ್ಯ ಬಿಜೆಪಿ ಸರ್ಕಾರಕ್ಕೆ ಮುಟ್ಟಿಸಿದ್ದರು. ಈ ಹಿನ್ನಲೆಯಲ್ಲಿ ರಮೇಶ್ ಕತ್ತಿಗೆ ಟಿಕೆಟ್ ನೀಡಲಾಗಿದೆ.

ಇನ್ನೂ 2ನೇ ಬಾರಿ ಪ್ರಭಾಕರ್ ಕೋರೆ ಆಯ್ಕೆ ಬಯಸಿದ್ದರಿಂದ ಅವರಿಗೂ ಟಿಕೆಟ್ ನೀಡಲಾಗಿದೆ.