ಜಮ್ಮು ಕಾಶ್ಮೀರದಲ್ಲಿ 5 ಉಗ್ರರ ಮಟ್ಯಾಷ್ ಮಾಡಿದ ಭದ್ರತಾ ಪಡೆ

ಜಮ್ಮು ಮತ್ತು ಕಾಶ್ಮೀರ: ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದೆ. ಈ ಕಾರ್ಯಾಚರಣೆಯಲ್ಲಿ ಐವರು ಉಗ್ರರನ್ನು ಎನ್​ಕೌಂಟರ್ ಮಾಡಲಾಗಿದೆ. ಶೋಪಿಯಾನ್​ನ ರೆಬಾನ್ ಗ್ರಾಮದಲ್ಲಿ ಈ ಎನ್​ಕೌಂಟರ್ ನಡೆಸಲಾಗಿದೆ.

ಮೃತ ಉಗ್ರರ ಗುರುತು ಮತ್ತು ಅವರು ಯಾವ ಗುಂಪಿನೊಂದಿಗೆ ಸಂಬಂಧ ಹೊಂದಿದ್ದರು ಎನ್ನುವ ಕುರಿತು ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

READ ALSO

ರೆಬನ್ ಪ್ರದೇಶದಲ್ಲಿ ಉಗ್ರರು ಅಡಗಿರುವ ನಿರ್ದಿಷ್ಟ ಮಾಹಿತಿಯ ಮೇರೆಗೆ ಭಾನುವಾರ ಬೆಳಗ್ಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಕೈಗೊಂಡಿದ್ದರು.