“ಆದಾಯಕ್ಕಿಂತ ಹೆಚ್ಚಿನ ಆಸ್ತಿ” ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಜಾ!

ಮಂಗಳೂರು: ಬಂಟ್ವಾಳ ತಾಲೂಕು ಸಹಾಯಕ ಕೃಷಿ ನಿರ್ದೇಶಕರಾಗಿದ್ದ ಜೋಸೆಫ್ ಡೇನಿಸ್ ಮಿರಾಂಡ ರವರು ತಮ್ಮ ಸೇವಾ ಅವಧಿಯಲ್ಲಿ ನಿಗದಿತ ಆದಾಯಕ್ಕಿಂತಲೂ ಮೀರಿ ಹೆಚ್ಛಿನ ಆಸ್ತಿಗಳನ್ನು ಹೊಂದಿದ್ದಾರೆಂದು ದಿನಾಂಕ 12-12-2017 ರಂದು ಆಗಿನ ಭ್ರಷ್ಟಾಚಾರ ನಿಗ್ರಹದಳದ ಡಿ. ವೈ.ಎಸ್.ಪಿ. ಸುಧೀರ್ ಹೆಗ್ಡೆ ಮತ್ತು ಇನ್ಸ್ಪೆಕ್ಟರ್ ಯೋಗೀಶ್ ಕುಮಾರ್ ತಂಡ ಕೇಸು ದಾಖಲಿಸಿ ದಾಳಿ ನಡೆಸಿ ಹಲವು ಸ್ವತ್ತುಗಳನ್ನು ವಶ ಪಡಿಸಿಕೊಂಡಿದ್ದರು. ಸುಮಾರು ಒಂದು ಕೋಟಿ ಏಳು ಲಕ್ಷದಷ್ಟು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಪತ್ತೆಯಾದ ಬಗ್ಗೆ ವರದಿಯಾಗಿತ್ತು.

ಬಂಧನದ ಭೀತಿಯಿಂದ ಆರೋಪಿ ಯು ಮಾನ್ಯ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಭ್ರಷ್ಟಾಚಾರ ವಿರೋಧಿ ಖಾಯಿದೆಯ ಪ್ರಕರಣಗಳ ವಿಚಾರಣಾ ವಿಶೇಷ ನ್ಯಾಯಾಲಯ ದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಸದ್ರಿ ಅರ್ಜಿಯನ್ನು ಮಂಗಳೂರಿನ ಮೂರನೇ ಸೆಷೆನ್ಸ್ ನ್ಯಾಯಾಲಯದ ನ್ಯಾಯಾಧೀಶ ಬಿ. ಬಿ. ಜಕಾತಿ ರವರು ವಜಾಗೊಳಿಸಿ ದಿನಾಂಕ 09-06-2020 ರಂದು ಆದೇಶಿಸಿದರು.
ಭ್ರಷ್ಟಾಚಾರ ನಿಗ್ರಹದಳದ ಪರ ವಕೀಲರಾದ ವಿಶೇಷ ಸರಕಾರಿ ಅಭಿಯೋಜಕ ಕೆ. ಎಸ್.ಎನ್. ರಾಜೇಶ್ ಆರೋಪಿಯ ಜಾಮೀನು ಅರ್ಜಿಗೆ ಪ್ರಬಲ ಆಕ್ಷೇಪ ವ್ಯಕ್ತಪಡಿಸಿದ್ದರು. ವಾದ ಪ್ರತಿವಾದ ಆಲಿಸಿದ್ದ ನ್ಯಾಯಾಧೀಶರಾದ ಬಿ. ಬಿ. ಜಕಾತಿ ರವರು ಆರೋಪಿ ಜೋಸೆಫ್ ಡೇನಿಸ್ ಮಿರಾಂಡ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ.

ಈ ಮೊದಲು ಮಾನ್ಯ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಭ್ರಷ್ಟಾಚಾರ ಕಾಯಿದೆಯ ಪ್ರಕರಣಗಳ ವಿಚಾರಣಾ ವಿಶೇಷ ನ್ಯಾಯಾದೀಶರಾಗಿದ್ದ ಶ್ರೀ ಬಿ. ಮುರಳೀಧರ ಪೈ ಯವರು ವರ್ಗಾವಣೆಗೊಂಡ ಬಳಿಕ ಶ್ರೀ. ಬಿ.ಬಿ. ಜಕಾತಿ ಯವರು ಬೆಂಗಳೂರಿನಿಂದ ವರ್ಗಾವಣೆ ಗೊಂಡು ಬಂದಿದ್ದು ದಿನಾಂಕ 01-06-2020 ರಂದು ಅಧಿಕಾರ ವಹಿಸಿಕೊಂಡಿರುತ್ತಾರೆ.

ದೊಡ್ಡ ಮೊತ್ತದ ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಹೊಂದಿದ ಬಗ್ಗೆ ಆರೋಪವಿದ್ದು ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಅಗತ್ಯವಿದ್ದಲ್ಲಿ ಬಂಧಿಸಬೇಕಾಗುವ ಸನ್ನಿವೇಶವನ್ನು ತಳ್ಳಿ ಹಾಕುವಂತಿಲ್ಲ ಎಂದು ಅಭಿಪ್ರಾಯ ಪಟ್ಟ ನ್ಯಾಯಧೀಶ ಬಿ.ಬಿ. ಜಕಾತಿ ಯವರು ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದರು.

ಮಂಗಳೂರಿನ ಭ್ರಷ್ಟಾಚಾರ ನಿಗ್ರಹ ದಳದ ಪರ ವಿಶೇಷ ಸರಕಾರಿ ಅಭಿಯೋಜಕ ಮತ್ತು ನ್ಯಾಯವಾದಿ ಕೆ. ಎಸ್. ಎನ್. ರಾಜೇಶ್ ವಾದಿಸಿದ್ದರು.

Spread the love
  • Related Posts

    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಡಿ.ಸಿ ಸಹಿತ 17ಜಿಲ್ಲಾಧಿಕಾರಿಯವರನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿ ಮಕ್ಕಳ ಅಚ್ಚುಮೆಚ್ಚಿನ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈಮುಹಿಲನ್ ರವರಿಗೆ ಬೆಂಗಳೂರಿಗೆ ವರ್ಗಾವಣೆಯಾಗಿದ್ದು ಸದ್ರಿಯವರ ತೆರವಾದ ಜಾಗಕ್ಕೆ ದರ್ಶನ HV ಯವರನ್ನು ವರ್ಗಾಯಿಸಿ…

    Spread the love

    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    ಬೆಳ್ತಂಗಡಿ: ಕಾಜೂರಿನಿಂದ ದಿಡುಪೆಗೆ ಹೋಗುವ ರಸ್ತೆಗೆ ಭಾರೀ ಮಳೆಗೆ ಹೆಮ್ಮರವೊಂದು ಉರುಳಿ ಬಿದ್ದು ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.ಬಳಿಕ ಸ್ಥಳೀಯರ ಸಹಕಾರದಿಂದ ಮರವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಯಿತು. ಪ್ರತಿದಿನ ಹತ್ತಾರು ವಾಹನಗಳು ಸಂಚರಿಸುವ ಈ ರಸ್ತೆಯಲ್ಲಿ ಮರ…

    Spread the love

    You Missed

    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ

    • By admin
    • June 17, 2025
    • 157 views
    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ  ವರ್ಗಾವಣೆ

    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    • By admin
    • June 16, 2025
    • 75 views
    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • June 16, 2025
    • 266 views
    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ  ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    • By admin
    • June 15, 2025
    • 184 views
    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    • By admin
    • June 12, 2025
    • 107 views
    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

    • By admin
    • June 12, 2025
    • 65 views
    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ