ಬಂಟ್ವಾಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ “ಉನ್ನತಿ ಸೌಧ” ಲೋಕಾರ್ಪಣೆ

ಬಂಟ್ವಾಳ: ಬಂಟ್ವಾಳ ಪೇಟೆಯಲ್ಲಿ ನಿರ್ಮಿಸಲಾದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ನ ಬಂಟ್ವಾಳ ತಾಲೂಕು ಯೋಜನಾ ಕಚೇರಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಚೇರಿ ಉನ್ನತಿ ಸೌಧವನ್ನು ಸರಳ ಸಮಾರಂಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಯು. ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿ ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕ ರುಕ್ಮಯ ಪೂಜಾರಿ, ಬಂಟ್ವಾಳ ತಾಲೂಕಿನ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಶ್ರೀ ಬಾಲಕೃಷ್ಣ ಆಳ್ವ, ಪ್ರಮುಖರಾದ ಎ.ಸಿ.ಭಂಡಾರಿ, ಬಂಟ್ವಾಳ ತಾಲೂಕಿನ ಒಕ್ಕೂಟ ಅಧ್ಯಕ್ಷರಾದ ಮಾಧವ ವಳವೂರು, ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಪ್ರಕಾಶ್ ಕಾರಂತ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯ ನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್ ಮಂಜುನಾಥ್, ಪ್ರಾದೇಶಿಕ ನಿರ್ದೇಶಕರಾದ ವಸಂತ ಸಾಲ್ಯಾನ್, ಕೇಂದ್ರ ಕಚೇರಿಯ ಸ್ಟೇಶನರಿ ವಿಭಾಗದ ನಿರ್ದೇಶಕ ಚಂದ್ರಶೇಖರ ನೆಲ್ಯಾಡಿ, ಕೇಂದ್ರ ಹಣಕಾಸು ಪ್ರಾದೇಶಿಕ ನಿರ್ದೇಶಕ ಶಾಂತಾರಾಮ ಪೈ, ಜಿಲ್ಲಾ ನಿರ್ದೇಶಕರಾದ ಸತೀಶ್ ಶೆಟ್ಟಿ, ತಾಲೂಕು ಯೋಜನಾಧಿಕಾರಿ ಜಯಾನಂದ.ಪಿ, ಜಿಲ್ಲಾ ಎಂಐಎಸ್ ಯೋಜನಾಧಿಕಾರಿ ಮಹಂತೇಶ್, ಬಂಟ್ವಾಳ ತಾಲೂಕಿನ ಒಕ್ಕೂಟಗಳ ವಲಯಾಧ್ಯಕ್ಷರು ಹಾಗೂ ಯೋಜನೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

READ ALSO