ಬೆಳ್ತಂಗಡಿ: ತಾಲೂಕಿನ ಕೊರೋನಾ ವಾರಿಯರ್ಸ್ ಆಶಾ ಕಾರ್ಯಕರ್ತೆಯರಿಗೆ ದಕ್ಷಿಣಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ ಡೈರಿ ಉತ್ಪನ್ನಗಳನ್ನು ವಿತರಿಸಲಾಯಿತು.
ಹಾಲು ಒಕ್ಕೂಟದ ನಿರ್ದೇಶಕರಾದ ಪದ್ಮನಾಭ ಶೆಟ್ಟಿ ಅರ್ಕಜೆ, ತಾಲೂಕಿನ ಶಾಸಕ ಹರೀಶ್ ಪೂಂಜ, ಆಶಾ ಮೇಲ್ವಿಚಾರಕಿ ಹರಿಣಿ, kmf ಸಿಬ್ಬಂದಿ ಮತ್ತು ತಾಲೂಕಿನ ಆಶಾಕಾರ್ಯಕರ್ತರು ಉಪಸ್ಥಿತರಿದ್ದರು.