ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ!

READ ALSO

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ (34ವ) ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎಂ ಎಸ್ ಧೋನಿ ಜೀವನ ಚರಿತ್ರೆಯನ್ನು ಸಾರುವ ಚಿತ್ರ ಧೋನಿಯಲ್ಲಿ ನಾಯಕನಾಗಿ ನಟಿಸಿದ್ದ ಇವರು ಕೇದಾರ್​ನಾಥ್​, ಪಿಕೆ, ಶುದ್ಧ್​ ದೇಸಿ ರೋಮ್ಯಾನ್ಸ್​ ಸಿನಿಮಾ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದರು. ಮುಂಬೈನಲ್ಲಿರುವ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

ಬಾಂದ್ರಾದಲ್ಲಿರುವ ತನ್ನ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಸುಶಾಂತ್ ಸಿಂಗ್ ರಜಪೂತ್ ಮೃತದೇಹ ಪತ್ತೆಯಾಗಿದೆ. ಇತ್ತೀಚಿಗಷ್ಟೇ ಸುಶಾಂತ್ ಸಿಂಗ್ ರವರ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಸಾವನ್ನಪ್ಪಿದ್ದರು.
ಸುಶಾಂತ್ ಸಿಂಗ್ ಧೋನಿ ಸಿನಿಮಾದ ನಟನೆಗಾಗಿ ಹಲವು ಪ್ರಶಸ್ತಿ ಪಡೆದಿದ್ದು ಟಿವಿ ಶೋ, ಡ್ಯಾನ್ ಶೋ ಗಳಲ್ಲೂ ಕೂಡ ಸುಶಾಂತ್ ಸಿಂಗ್ ಮಿಂಚಿದ್ದರು. ಯುವನಟನ ಆತ್ಮಹತ್ಯೆಗೆ ಕಾರಣ ಇನ್ನೂ ಕೂಡ ತಿಳಿದುಬಂದಿಲ್ಲ