“ಸೇವಾ ಸಿಂಧು” ಮೂಲಕ ಆನ್ ಲೈನ್ ನಲ್ಲಿ ಕ್ಯಾಬ್, ಟ್ಯಾಕ್ಸಿ, ಆಟೋ ಚಾಲಕರು 5ಸಾವಿರ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಬೇಕು

ಬೆಂಗಳೂರು: ಕೋವಿಡ್ 19ಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರು ರಾಜ್ಯದ ಆಟೋ ಹಾಗೂ ಟ್ಯಾಕ್ಸಿ ಚಾಲಕರುಗಳಿಗೆ 5ಸಾವಿರ ಪರಿಹಾರಧನ ಘೋಷಿಸಿದ್ದು ಇದನ್ನು ಪಡೆಯಲು “ಸೇವಾಸಿಂಧು” ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಹಾಕುವಂತೆ ಸೂಚಿಸಲಾಗಿದೆ.

ಕೊರೊನಾ ಲಾಕ್‌ಡೌನ್‌ನಿಂದಾಗಿ ತತ್ತರಿಸಿರುವ ಜನರ ಅನುಕೂಲಕ್ಕಾಗಿ ರಾಜ್ಯ ಸರಕಾರ 1,610 ಕೋ.ರೂ.ಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ, ರಾಜ್ಯದ 7.5 ಲಕ್ಷ ಟ್ಯಾಕ್ಸಿ, ಕ್ಯಾಬ್ ಹಾಗೂ ಆಟೋ ಚಾಲಕರಿಗೆ 5,000 ರೂಪಾಯಿಗಳ ಸಹಾಯಧನವನ್ನು ಘೋಷಣೆ ಮಾಡದ್ದು ಸಹಾಯಧನ ಪಡೆಯಲು ಅರ್ಜಿಗಳನ್ನು ಆನ್ ಲೈನ್ ನಲ್ಲಿ “ಸೇವಾಸಿಂಧು” ಪೊರ್ಟೆಲ್ ನ ಮೂಲಕವೇ ಅರ್ಜಿ ಸಲ್ಲಿಸುವಂತೆ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ತಿಳಿಸಿರುತ್ತಾರೆ.

READ ALSO

ಇದೀಗ ವಿಶೇಷ ಪ್ಯಾಕೇಜ್‌ನಲ್ಲಿ ಘೋಷಣೆಯಾದ ಹಣವನ್ನು ಅರ್ಹ ಚಾಲಕರಿಗೆ ತಲುಪಿಸುವ ಸಲುವಾಗಿ ಸುತ್ತೋಲೆ ಹೊರಡಿಸಿರುವ ಸಾರಿಗೆ ಇಲಾಖೆ “ಸೇವಾ ಸಿಂಧು” ಜಾಲತಾಣದ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. “ಸೇವಾ ಸಿಂಧು” ಜಾಲತಾಣದ ಮೂಲಕ ಅರ್ಜಿ ಸಲ್ಲಿಸುವ ಫಲಾನುಭವಿಗಳಿಗೆ ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುತ್ತದೆ.

ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ https://sevasindhu.karnataka.gov.in/Sevasindhu/Kannada?ReturnUrl=%2F