ರೈಲ್ವೆ ಪ್ರಯಾಣಕ್ಕೆ ಕಡಾಯವಾಗಿ ಬೇಕಿದೆ ಆರೋಗ್ಯ ಸೇತು ಆ್ಯಪ್ ಬಳಕೆ

ನವದೆಹಲಿ : ಲಾಕ್ ಡೌನ್ ನಡುವಲ್ಲಿಯೇ ದೇಶದ ಹಲವು ರಾಜ್ಯಗಳಿಗೆ ರೈಲು ಸಂಚಾರ ಆರಂಭಗೊಂಡಿದೆ. ರೈಲು ಪ್ರಯಾಣಕ್ಕಾಗಿ ರೈಲ್ವೆ ಇಲಾಖೆ ಹೊಸ ಮಾರ್ಗ ಸೂಚಿಯನ್ನು ಪ್ರಕಟಿಸಿದೆ. ಕೊರೊನಾ ಸೋಂಕಿನ ತಡೆಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅಲ್ಲದೇ ರೈಲ್ವೆ ಪ್ರಯಾಣಿಕರು ಕಡ್ಡಾಯವಾಗಿ ಆರೋಗ್ಯ ಸೇತು ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳುವಂತೆ ಸೂಚನೆಯನ್ನು ನೀಡಿದೆ.

ಲಾಕ್ ಡೌನ್ ಬೆನ್ನಲ್ಲೇ ಆರಂಭವಾಗಿರುವ ರೈಲುಗಳಲ್ಲಿ ಹಲವು ಮಾರ್ಪಾಡುಗಳನ್ನು ಮಾಡಲಾಗಿದೆ. ಮಾತ್ರವಲ್ಲ ಮೊದಲ ದಿನವೇ ಬರೋಬ್ಬರಿ 16 ಕೋಟಿಗೂ ಅಧಿಕ ಆದಾಯ ರೈಲ್ವೆ ಇಲಾಖೆಗೆ ಹರಿದು ಬಂದಿದೆ. ಪ್ರಯಾಣಿಕರ ಸಂಖ್ಯೆ ಕೂಡ ಹೆಚ್ಚಳವಾಗಿರುವುದರಿಂದಾಗಿ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.

READ ALSO

ಕೊರೊನಾ ಹಿನ್ನೆಲೆಯಲ್ಲಿ ರೈಲ್ವೆ ಪ್ರಯಾಣಿಕರಿಗೆ ಕೌಂಟರ್ ಟಿಕೆಟ್ ವ್ಯವಸ್ಥೆಯನ್ನು ಬಂದ್ ಮಾಡಿ, ಕೇವಲ ಆನ್ ಲೈನ್ ಮೂಲಕವಷ್ಟೇ ಟಿಕೆಟ್ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ. ಅಲ್ಲದೇ ರೈಲ್ವೆ ಪ್ರಯಾಣಿಕರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್ ಬಳಕೆಯನ್ನು ಕಡ್ಡಾಯಗೊಳಿಸಿದೆ. ಇದೀಗ ರೈಲ್ವೆ ಇಲಾಖೆ ಆರೋಗ್ಯ ಸೇತು ಆ್ಯಪ್ ನ್ನು ಪ್ರಯಾಣಿಕರು ಕಡ್ಡಾಯವಾಗಿ ಬಳಸಬೇಕೆಂದು ಆದೇಶಿಸಿದೆ.