ಧರ್ಮಸ್ಥಳ ಗ್ರಾ.ಯೋ ವತಿಯಿಂದ ಮಾದರಿ ಕಾರ್ಯ ಕ್ಯಾನ್ಸರ್ ನಿಂದ ಬಳಲುತ್ತಿರುವ ಕುಟುಂಬಕ್ಕೆ ಸಹಾಯ ಹಸ್ತದ ಜೊತೆಗೆ 72 ಬಡ ಹೋಮ್ ಗಾರ್ಡ್ಸ್ ಕುಟುಂಬಗಳಿಗೆ ಆಗತ್ಯವಸ್ತುಗಳ ವಿತರಣೆ

ಶಿಡ್ಲಘಟ್ಟ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರ ಆಶಯದಂತೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಕೊರೊನಾ ವೈರಸ್ ತಡೆಗಟ್ಟಲು ಶ್ರಮಿಸುತ್ತಿರುವ 72 ಹೋಮ್ ಗಾರ್ಡ್ಸ್ ಬಡ ಕುಟುಂಬಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧಿ ಯೋಜನೆಯ ವತಿಯಿಂದ 35000 ಮೊತ್ತದ ಜೀವನಾವಶ್ಯಕ ಆಹಾರ ವಸ್ತುಗಳನ್ನು ವಿತರಿಸಲಾಯಿತು.

ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಮಾಜಿ ಸಚಿವರಾದ ವಿ.ಮುನಿಯಪ್ಪˌ ಮಾನ್ಯ ತಹಶೀಲ್ದಾರ್ ಅರುಂಧತಿˌ ತಾಲೂಕಿನ ಕಾರ್ಯ ನಿರ್ವಹಣಾಧಿಕಾರಿ ಶಿವಕುಮಾರ್, ಜಿಲ್ಲಾ ಹೋಮ್ ಗಾರ್ಡ್ಸ್ ಕಮಾಂಡೆಂಟ್ ಮತ್ತು ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ವಸಂತ, ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಮತ್ತು ಜನಜಾಗೃತಿ ವೇದಿಕೆಯ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳುˌ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರುˌ ಸೇವಾಪ್ರತಿನಿಧಿಯವರು ಉಪಸ್ಥಿತರಿದ್ದರು.

READ ALSO

ಕ್ಯಾನ್ಸರ್ ನಿಂದ ಬಳಲುತ್ತಿರುವ ಕುಟುಂಬಕ್ಕೆ ಸಹಾಯ ಹಸ್ತ

ಈ ಸಂದರ್ಭದಲ್ಲಿ ಮಾರಕ ಕ್ಯಾನ್ಸರ್ ನಿಂದ ಬಳಲುತ್ತಿರುವ ಮಳ್ಳೂರಿನ ರತ್ನಮ್ಮರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ಧಿ ಯೋಜನೆ ವತಿಯಿಂದ 40000 ಸಹಾಯಧನ ವಿತರಣೆ ಮಾಡಲಾಯಿತು.