
ಪ್ರೊ.ಕೆ.ಎಸ್.ನಿಸಾರ್ ಅಹಮದ್ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಶ್ರೀ ಅಹಮದ್ ರವರ ಪೂರ್ಣ ಹೆಸರು ‘ಕೊಕ್ಕರೆ ಹೊಸಳ್ಳಿ ಶೇಖಹೈದರ ನಿಸಾರ್ ಅಹಮದ್’.
ಪ್ರೊ. ಕೆ.ಎಸ್.ನಿಸಾರ್ ಅಹಮದ್ ಬೆಂಗಳೂರು ಜಿಲ್ಲೆಯ ದೇವನಹಳ್ಳಿಯಲ್ಲಿ ಫೆಬ್ರುವರಿ 5,1936ರಲ್ಲಿ ಜನಿಸಿದರು. 1959ರಲ್ಲಿ ಭೂವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದರು. 1994ರ ವರೆಗೆ ವಿವಿಧ ಸರಕಾರಿ ಕಾಲೇಜುಗಳಲ್ಲಿ ಅಧ್ಯಾಪಕ ಹಾಗು ಪ್ರಾಧ್ಯಾಪಕರಾಗಿ ಕೆಲಸ ಮಾಡಿ ನಿವೃತ್ತರಾದರು. ರಾಜ್ಯ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
73ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
ಬೆಂಗಳೂರಿನ ಪದ್ಮನಾಭನಗರದ ತಮ್ಮ ನಿವಾಸದಲ್ಲಿ ಇಂದು ನಿಧನರಾಗಿದ್ದಾರೆ. ಇವರು ನಾಲ್ವರು ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.