ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಎಕ್ಸೆಲ್ ಪಿಯು ಕಾಲೇಜಿನಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕಾಲೇಜಿನಲ್ಲಿ ಸ್ಟೂಡೆಂಟ್ ವೆಲ್ಫೇರ್ ಆಫೀಸರ್ (Student Welfare Officer) ಹಾಗೂ ಪುರುಷ ಮತ್ತು ಮಹಿಳಾ ವಾರ್ಡನ್ (Male & Female Wardens) ಸೆಕ್ಯೂರಿಟಿ ಗಾರ್ಡ್ ,ಅಡ್ಮಿಷನ್ ಕೋಆರ್ಡಿನೇಟರ್ ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆಕ್ಯೂರಿಟಿ ಗಾರ್ಡ್: 15 ಪುರುಷ ಅಭ್ಯರ್ಥಿಗಳು. ಅಡ್ಮಿಷನ್ ಕೋಆರ್ಡಿನೇಟರ್: 15 ಮಹಿಳಾ ಅಭ್ಯರ್ಥಿಗಳು., ಸ್ಟೂಡೆಂಟ್ ವೆಲ್ಫೇರ್ ಆಫೀಸರ್: 5 ಅಭ್ಯರ್ಥಿಗಳು. ವಾರ್ಡನ್: ಅಗತ್ಯವಿರುವ ಅಭ್ಯರ್ಥಿಗಳ ನೇಮಕಾತಿ.
ಸ್ಟೂಡೆಂಟ್ ವೆಲ್ಫೇರ್ ಆಫೀಸರ್ ಹುದ್ದೆಗೆ 3ರಿಂದ 5 ವರ್ಷಗಳ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ವಾರ್ಡನ್ ಹುದ್ದೆಗಳಿಗೆ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಥಿಗಳ ನಿರ್ವಹಣೆ, ಶಿಸ್ತು ಪಾಲನೆ, ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡುವುದು ಹಾಗೂ ಪೋಷಕರು ಮತ್ತು ಕಾಲೇಜಿನ ಸಿಬ್ಬಂದಿಯೊಂದಿಗೆ ಉತ್ತಮ ಸಂವಹನ ನಡೆಸುವ ಸಾಮರ್ಥ್ಯ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಆಕರ್ಷಕ ವೇತನದ ಜತೆಗೆ ಉಚಿತ ಊಟ ಮತ್ತು ವಸತಿ ಸೌಲಭ್ಯವನ್ನು ಒದಗಿಸಲಾಗುವುದು.
ಸ್ಟೂಡೆಂಟ್ ವೆಲ್ಫೇರ್ ಆಫೀಸರ್ ಹುದ್ದೆಗೆ ನವೆಂಬರ್ 18ರಿಂದ 21ರವರೆಗೆ ನೇರ ಸಂದರ್ಶನ (Walk-in Interview) ಆಯೋಜಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ನವೀಕೃತ ರೆಸ್ಯೂಮ್‌ನೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.
ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಅನ್ನು excelpucollege@gmail.com ಇ-ಮೇಲ್ ವಿಳಾಸಕ್ಕೂ ಕಳುಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ 8073701325, 8618999257 ಹಾಗೂ 9036152855 ಸಂಪರ್ಕಿಸಬಹುದು.
ವಿಳಾಸ: ಎಕ್ಸೆಲ್ ಪಿಯು ಕಾಲೇಜು, ಗುರುವಾಯನಕೆರೆ, ಬೆಳ್ತಂಗಡಿ ತಾಲೂಕು, ಮಂಗಳೂರು – 574217




