ಬೆಂಗಳೂರು : ಜೂನ್ 29ರಂದು ನಡೆಯಲಿರುವ ವಿಧಾನ ಪರಿಷತ್ ನ 7 ಸ್ಥಾನಗಳಿಗೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಡುಗಡೆ ಗೊಳಿಸಿದೆ.
ಬೆಳ್ತಂಗಡಿಯ ಪ್ರತಾಪ ಸಿಂಹ ನಾಯಕ್, MTB ನಾಗರಾಜ್, ಆರ್.ಶಂಕರ್, ಸುನಿಲ್ ವಯ್ಯಾಪುರೆ ಯವರಿಗೆ ವಿಧಾನ ಪರಿಷತ್ ಗೆ ಟಿಕೆಟ್ ಖಚಿತಗೊಳಿಸಲಾಗಿದೆ.
ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು ವಿಧಾನಸಭಾ ಬಲಾ ಬಲದ ಆಧಾರದ ಮೇಲೆ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ 4, ಕಾಂಗ್ರೆಸ್ 2 ಹಾಗೂ ಜೆಡಿಎಸ್ 1 ಸ್ಥಾನಗಳನ್ನು ಗೆಲ್ಲಲು ಅವಕಾಶವಿದೆ.
ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಕಾಂಗ್ರೆಸ್ ವಿರುದ್ದ ಮುನಿಸಿಕೊಂಡು ಬಿಜೆಪಿ ಸೇರಿದ್ದ MTB ನಾಗರಾಜ್, ಆರ್.ಶಂಕರ್, ಎಚ್.ವಿಶ್ವನಾಥ್ ಹಾಗೂ ಬಿಎಸ್ ವೈ ಪರಮಾಪ್ತ ಸುನಿಲ್ ವಯ್ಯಾಪುರೆ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು.
ಬಿಜೆಪಿ ಸರಕಾರ ರಚನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಎಚ್.ವಿಶ್ವನಾಥ್ ಗೆ ಬಿಜೆಪಿ ಭರ್ಜರಿ ಶಾಕ್ ನೀಡಿದ್ದು, ವಿಧಾನ ಪರಿಷತ್ ಗೆ ಆಯ್ಕೆಯಾಗಿ ಸಚಿವರಾಗುವ ಕನಸು ಕಂಡಿದ್ದ ಹಳ್ಳಿಹಕ್ಕಿ ಎಚ್.ವಿಶ್ವನಾಥ್ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿ ಬಿ.ಜೆ.ಪಿಯ ಪಕ್ಷದ ಹಿರಿಯ ಕಾರ್ಯಕರ್ತರು ಹಾಗೂ ಪಕ್ಷ ಸಂಘಟನೆಗೆ ನೀಡಿದ ಕೊಡುಗೆಯನ್ನು ಗಮನಿಸಿ ಬೆಳ್ತಂಗಡಿಯ ಪ್ರತಾಪ ಸಿಂಹ ನಾಯಕ್ ರವರಿಗೆ ಟಿಕೇಟ್ ಖಚಿತಗೊಳಿಸಲಾಗಿದೆ.