ಕ್ವಾರಂಟೈನ್‌ ದಿನಗಳನ್ನು ವ್ಯರ್ಥ ಮಾಡದೆ ಶಾಲಾ ಪರಿಸರವನ್ನು ಸ್ವಚ್ಛತೆ ಮಾಡಿ ರಾಜ್ಯಕ್ಕೆ ಮಾದರಿಯಾದ ಮುಂಬೈ ಕನ್ನಡಿಗರು

ಬೆಳ್ತಂಗಡಿ: ಮುಂಬೈನಿಂದ ಬಂದು ಮರೋಡಿ ಗ್ರಾಮದ ಮೂರು ಶಾಲೆಗಳಲ್ಲಿ ಕ್ವಾರಂಟೈನ್‌ನಲ್ಲಿದ್ದ ಸುಮಾರು 64 ಮಂದಿಗೆ ಶಾಸಕ ಹರೀಶ್‌ ಪೂಂಜ ಅವರು ಭಾನುವಾರ ತೆಂಗಿನ ಸಸಿಗಳನ್ನು ವಿತರಿಸಿ, ಬೀಳ್ಕೊಟ್ಟರು.

ಕೂಕ್ರಬೆಟ್ಟು ಸರ್ಕಾರಿ ಶಾಲೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಹರೀಶ್‌ ಪೂಂಜ ಮಾತನಾಡಿ, ‘ಈ ಶಾಲೆಯಲ್ಲಿ ಕ್ವಾರಂಟೈನ್‌ನಲ್ಲಿದ್ದ 25 ಮಂದಿ ಶಾಲೆಗೆ ಹೊಸ ರೂಪವನ್ನು ಕೊಟ್ಟಿದ್ದಾರೆ. ಕ್ವಾರಂಟೈನ್‌ ಅವಧಿಯ ದಿನಗಳನ್ನು ವ್ಯರ್ಥ ಮಾಡದೆ ಶಾಲಾ ಪರಿಸರವನ್ನು ಸ್ವಚ್ಛತೆ ಮಾಡಿ ರಾಜ್ಯಕ್ಕೆ ಮಾದರಿಯಾಗಿದ್ದಾರೆ. ಉದ್ಯೋಗ ಅರಸಿ ಪರವೂರಿಗೆ ಹೋದವರು ಸಂಕಷ್ಟಕ್ಕೆ ಸಿಲುಕಿದಾಗ ಅವರಿಗೆ ಸ್ಪಂದಿಸುವುದು ಊರಿನವರು ಕರ್ತವ್ಯ. ಈ ನಿಟ್ಟಿನಲ್ಲಿ ಇಲ್ಲಿನ ಗ್ರಾಮಸ್ಥರಿಗೆ ವಿಶೇಷ ಅಭಿನಂದನೆ ಸಲ್ಲಿಸುತ್ತೇನೆ’ ಎಂದು ಹೇಳಿದರು.

ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್‌ ಮಾತನಾಡಿ, ‘ಮುಂಬೈನಲ್ಲಿ ಒಂದೇ ಕುಟುಂಬದಂತೆ ಇದ್ದ 25 ಮಂದಿ ಕೂಕ್ರಬೆಟ್ಟು ಶಾಲೆಗೆ ಬಸ್‌ನಲ್ಲಿ ಬಂದು 14 ದಿನ ಕ್ವಾರಂಟೈನ್‌ ಮುಗಿಸಿದ್ದಾರೆ. ಅವರು ಕೂಕ್ರಬೆಟ್ಟು ಶಾಲೆಯಲ್ಲಿ ಶ್ರಮದಾನದ ಮೂಲಕ ಶಾಲೆಗೆ ವಿಶೇಷ ಮೆರುಗು ನೀಡಿದ್ದಾರೆ. ದಾನಿಗಳ ಸಹಕಾರದಿಂದ ಅವರಿಗೆ ಊಟೋಪಚಾರ ನೀಡಲಾಗಿದೆ. ಮರೋಡಿ ಗ್ರಾಮದಲ್ಲಿ ಕ್ವಾರಂಟೈನ್‌ನಲ್ಲಿದ್ದ ಎಲ್ಲರ ಕೋವಿಡ್‌ ವರದಿ ನೆಗೆಟಿವ್‌ ಬಂದಿದೆ’ ಎಂದರು.

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ, ಧಾರ್ಮಿಕ ಪರಿಷತ್‌ ಸದಸ್ಯ ದೇವೇಂದ್ರ ಹೆಗ್ಡೆ ಕೊಕ್ರಾಡಿ ಮಾತನಾಡಿ, ‘ತುಳುನಾಡಿನ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಮುಂಬೈ ಕನ್ನಡಿಗರ ಕೊಡುಗೆ ಅಪಾರವಾದುದು. ಕೋವಿಡ್‌ನಿಂದಾಗಿ ಮುಂಬೈನಲ್ಲಿ ಸಂಕಷ್ಟ ಎದುರಾದಾಗ ನಮ್ಮವರ ಕಷ್ಟಕ್ಕೆ ಸ್ಪಂದಿಸುವುದು ಮಾನವೀಯತೆ’ ಎಂದು ಹೇಳಿದರು.

ಮರೋಡಿ ಶ್ರೀ ಆದಿಶಕ್ತಿ ಸೇವಾ ಸಮಿತಿಯ ಅಧ್ಯಕ್ಷ ರತ್ನಾಕರ ಬುಣ್ಣಾನ್‌, ಕೂಕ್ರಬೆಟ್ಟು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಜುಪೂಜಾರಿ, ಮುಖ್ಯಶಿಕ್ಷಕಿ ಸುಫಲಾ, ಮರೋಡಿ ಗ್ರಾಮ ಪಂಚಾಯಿತಿ ಪಿಡಿಒ ಆಶಾಲತಾ, ಸದಸ್ಯರಾದ ಉಮೇಶ್‌ ಪೂಜಾರಿ, ಪದ್ಮಶ್ರೀ ಜೈನ್‌, ಶಿವಾನಂದ ಆಚಾರ್ಯ, ಬಾರ್ಯ ಸಿ.ಎ. ಬ್ಯಾಂಕ್‌ ಅಧ್ಯಕ್ಷ ಸುಬ್ರಹ್ಮಣ್ಯ ಗೌಡ, ಸದಾನಂದ ಉಂಗಿಲಬೈಲು, ಮಾಜಿ ಅಧ್ಯಕ್ಷ ಬಾಲಕೃಷ್ಣ ಬಂಗೇರ, ಮಹೇಶ್‌ ಪೂಜಾರಿ ಮರೋಡಿ ಮತ್ತಿತರರು ಉಪಸ್ಥಿತರಿದ್ದರು.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 56 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 97 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 42 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 608 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 149 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 62 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ