ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜರವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ವೈ 3ಸಾವಿರಕ್ಕೂ ಹೆಚ್ಚು ಗೃಹರಕ್ಷಕ ದಳದ ಸಿಬ್ಬಂದಿಯನ್ನು ಮತ್ತೆ ಸೇವೆಯಲ್ಲಿ ಮುಂದುವರೆಸಲು ಸೂಚನೆ

ಬೆಂಗಳೂರು: ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ರವರು ಗೃಹರಕ್ಷಕ ದಳದ ಸಿಬ್ಬಂದಿಯನ್ನು ಕೆಲಸದಿಂದ ತೆಗೆಯದೆ ಅವರನ್ನು ಮತ್ತೆ ಸೇವೆಯಲ್ಲಿ ಮುಂದುವರೆಸಿ ಎಂಬ ಮನವಿಯನ್ನು ಮುಖ್ಯಮಂತ್ರಿಯವರಿಗೆ ನೀಡಿದ ಬೆನ್ನಲ್ಲೇ ಶಾಸಕರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರು, ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿರುವ ಮೂರು ಸಾವಿರಕ್ಕೂ ಹೆಚ್ಚು ಗೃಹರಕ್ಷಕ ದಳದ ಸಿಬ್ಬಂದಿಯನ್ನು ಮತ್ತೆ ಸೇವೆಯಲ್ಲಿ ಮುಂದುವರಿಸಿ ವಿವಿಧ ಇಲಾಖೆಗಳಿಗೆ ನಿಯೋಜಿಸಲು ಹಾಗೂ ಮುಂದಿನ ದಿನಗಳಲ್ಲಿ ಖಾಸಗಿ ಸಂಸ್ಥೆಗಳಿಗೆ ಹೋಂ-ಗಾರ್ಡ್ ಗಳ ಸೇವೆಯನ್ನು ಒದಗಿಸುವ ಕುರಿತು ಕ್ರಮ ವಹಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಮುಂಗಾರು ಸಂದರ್ಭದಲ್ಲಿ 200 ಮಂದಿ ಎಸ್.ಡಿ.ಆರ್.ಎಫ್ ಸಿಬ್ಬಂದಿಗೆ ತರಬೇತಿ ಪ್ರಾರಂಭವಾಗಿದೆ. ಕೆಲವು ದಿನಗಳಲ್ಲಿ ಅವರನ್ನು ನಾಲ್ಕು ವಿಭಾಗಗಳಲ್ಲಿ ನಿಯೋಜಿಸಲು ಸಾಧ್ಯವಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ಗುರುವಾರ ಗೃಹ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿ
ಕೋವಿಡ್-19 ನಿಯಂತ್ರಣ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಕುರಿತು ಶ್ಲಾಘಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ಇಲಾಖೆಯ ಸುಧಾರಣೆಗೆ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದರು.

ರಾಜ್ಯದಲ್ಲಿ ಪೊಲೀಸ್ ಇಲಾಖೆಯು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ರಾಜ್ಯದಲ್ಲಿ ಬದಲಾದ ಸನ್ನಿವೇಶಗಳಲ್ಲಿ ಸಿಇಎನ್(ಸೈಬರ್ ಕ್ರೈಂ, ಎಕನಾಮಿಕ್ ಅಫೆನ್ಸ್ ಮತ್ತು ನಾರ್ಕೊಟಿಕ್ಸ್) ಠಾಣೆಗಳನ್ನು ಬಲಪಡಿಸಲು ಆದ್ಯತೆ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಅಪರಾಧಗಳನ್ನು ತ್ವರಿತವಾಗಿ ಪತ್ತೆ ಹಚ್ಚುವ ನಿಟ್ಟಿನಲ್ಲಿ ಫಾರೆನ್ಸಿಕ್ ಪ್ರಯೋಗಾಲಯಗಳನ್ನು ಬಲಪಡಿಸಲು ಹಾಗೂ
ತುರ್ತು ಸ್ಪಂದನೆ ವ್ಯವಸ್ಥೆ ಯೋಜನೆಯಡಿ ವಾಹನ ಖರೀದಿಗೆ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಗೃಹ ಇಲಾಖೆಯಡಿ ಬರುವ ಎಲ್ಲ ಇಲಾಖೆಗಳ ವಿವಿಧ ಮೂಲ ಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ವಸ್ತುಸ್ಥಿತಿ ಆಧರಿಸಿ, ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಪೊಲೀಸ್ ಮಹಾನಿರ್ದೇಶಕ ಮತ್ತು ಮಹಾನಿರೀಕ್ಷಕರಾದ ಪ್ರವೀಣ್ ಸೂದ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು

Spread the love
  • Related Posts

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಬಾರಿ ಮಳೆ ಹಿನ್ನೆಲೆಯಲ್ಲಿ 30/08/2025ನೇ ಶುಕ್ರವಾರ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶವನ್ನು ಹೊರಡಿಸಿದೆ. Spread the love

    Spread the love

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಸಕಲೇಶಪುರ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಾನುಬಾಳು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸಕಲೇಶಪುರ ವತಿಯಿಂದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಪರಮ ಪೂಜ್ಯ ಶ್ರೀ ಡಾ.ಡಿ ವಿರೇಂದ್ರ…

    Spread the love

    You Missed

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • August 29, 2025
    • 279 views
    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    • By admin
    • August 29, 2025
    • 45 views
    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    • By admin
    • August 28, 2025
    • 315 views
    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    • By admin
    • August 28, 2025
    • 53 views
    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    • By admin
    • August 27, 2025
    • 110 views
    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ ಆಯ್ಕೆ

    • By admin
    • August 25, 2025
    • 52 views
    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ