ಗುಟ್ಕಾ-ಪಾನ್ ಮಸಾಲ ಪ್ರೀಯರೇ ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಉತ್ಪನ್ನ ಜಗಿದರೆ ಬೀಳುತ್ತೆ ಕೇಸ್! ಇಂದು 32ಮಂದಿಯ ವಿರುದ್ಧ ಪ್ರಕರಣ ದಾಖಲು!

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಗುಟ್ಕಾ-ಪಾನ್ ಮಸಾಲ ತಿನ್ನುವವರ ವಿರುದ್ಧ ಕಾರ್ಯಾಚರಣೆ ನಡೆಸಿದ ಆಹಾರ ಸುರಕ್ಷತಾ ಅಧಿಕಾರಿಗಳು, 32 ಮಂದಿಯ ವಿರುದ್ಧ ಕೇಸು ದಾಖಲಿಸಿದ್ದಾರೆ.

ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆಯ ತಂಡವು ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಉತ್ಪನ್ನಗಳ ಸೇವನೆ ಹಾಗೂ ಕೋಪ್ಟಾ -2003 ಕಾಯಿದೆ ಉಲ್ಲಂಘನೆ ವಿರುದ್ದ ನಗರದ ಹೊರವಲಯದ ದೇರಳಕಟ್ಟೆ ಪರಿಸರದಲ್ಲಿ ಕಾರ್ಯಾಚರಣೆ ನಡೆಸಿತು.

ಈ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಾದ ಬಸ್‍ಸ್ಟಾಂಡ್, ರಸ್ತೆ ಬದಿಗಳಲ್ಲಿ, ಅಂಗಡಿ ವಠಾರ ಮತ್ತಿತರ ಸ್ಥಳಗಳಲ್ಲಿ ಹಲವು ಮಂದಿ ಬಹಿರಂಗವಾಗಿಯೇ ಪಾನ್ ಮಸಾಲೆ ಹಾಗೂ ತಂಬಾಕು ಉತ್ಪನ್ನಗಳನ್ನು ತಿನ್ನುತ್ತಿದ್ದವರ ವಿರುದ್ಧ ಸ್ಥಳದಲ್ಲಿಯೇ ಪ್ರಕರಣ ದಾಖಲಿಸಿಕೊಂಡಿದೆ. ಒಟ್ಟು 32 ಪ್ರಕರಣ ದಾಖಲಿಸಿ ರೂ. 3100 ದಂಡ ವಿಧಿಸಲಾಯಿತು.

ಇದೇ ಸಂದರ್ಭದಲ್ಲಿ ಕೋಪ್ಟಾ ಕಾಯಿದೆಯ ಕುರಿತಂತೆ ಅಂಗಡಿ ಹಾಗೂ ಹೋಟೇಲ್ ಮಾಲಿಕರಿಗೆ ಮಾಹಿತಿ ನೀಡಲಾಯಿತು. ಸಾರ್ವಜನಿಕ ಸ್ಥಳಗಳಲ್ಲಿ ಪಾನ್ ಮಸಾಲ ಹಾಗೂ ತಂಬಾಕು ಉತ್ಪನ್ನಗಳನ್ನು ತಿನ್ನದಂತೆ ಗ್ರಾಹಕರಿಗೆ ಸೂಚಿಸಲು ಅಂಗಡಿ ಮಾಲೀಕರಿಗೆ ಸೂಚಿಸಲಾಯಿತು. ಅಲ್ಲದೇ, ಈ ಕುರಿತು ಸಹಕರಿಸದಿದ್ದರೆ, ಕಾಯಿದೆಯನ್ವಯ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಯಿತು.

ಜಗಿಯುವ ತಂಬಾಕು ಹಾಗೂ ಪಾನ್ ಮಸಾಲ ಉತ್ಪನ್ನಗಳನ್ನು ಜಗಿದು ಉಗಿಯುವುದರಿಂದ ಕೋವಿಡ್ 19 ಹಾಗೂ ಇತರೆ ಸಾಂಕ್ರಾಮಿಕ ರೋಗಗಳು ಇತರರಿಗೆ ಹರಡುವ ಸಂಭವ ಅಧಿಕವಾಗಿದೆ. ಪ್ರಸಕ್ತ ಕೋವಿಡ್ ವ್ಯಾಪಕವಾಗಿರುವುದರಿಂದ ಈ ರೀತಿ ಪಾನ್ ಮಸಾಲೆ ತಿಂದು ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ಹೆಚ್ಚು ಅಪಾಯಕಾರಿಯಾಗಿದೆ. ಇಂತಹ ಉಗುಳನ್ನು ಇತರ ಸಾರ್ವಜನಿಕರಿಗೆ ನಡೆದುಕೊಂಡು ಹೋಗುವಾಗ ಗೊತ್ತಿಲ್ಲದೇ ಮೆಟ್ಟುವುದರಿಂದ ಇದು ಸಾಂಕ್ರಾಮಿಕ ರೋಗ ಹಬ್ಬಲೂ ಕಾರಣವಾಗುತ್ತಿದೆ.

ಈ ಕಾರ್ಯಾಚರಣೆಯಲ್ಲಿ ಹಿರಿಯ ಆಹಾರ ಸುರಕ್ಷತಾಧಿಕಾರಿ ರಾಜು, ಸಮಾಜ ಕಾರ್ಯಕರ್ತೆ ಶ್ರುತಿ ಸಾಲ್ಯಾನ್, ಕೋಣಾಜೆ ಠಾಣಾ ಪೊಲೀಸ್ ಉಪನಿರೀಕ್ಷಕ ಶರಣಪ್ಪ , ಸಿಬ್ಬಂದಿ ಪುನೀತ್, ವಿದ್ಯಾ ಮತ್ತಿತರು ಉಪಸ್ಥಿತರಿದ್ದರು.

ಮುಂದಿನ ದಿನಗಳಲ್ಲಿ ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಆಹಾರ ಸುರಕ್ಷತಾಧಿಕಾರಿಗಳು ತಿಳಿಸಿದ್ದಾರೆ.

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 4 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 6 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 6 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 12 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 7 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 10 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ