ರಾಜ್ಯ ಸಚಿವ ಸಂಪುಟಕ್ಕೆ ಭರ್ಜರಿ ಸರ್ಜರಿ ನಡೆಸಲು ವರಿಷ್ಠರ ತೀರ್ಮಾನ!!!!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆಯಾಗುವ ಬಹುತೇಕ ಸಾಧ್ಯತೆ ಇದ್ದು ರಾಜ್ಯ ಸಚಿವ ಸಂಪುಟಕ್ಕೆ ಭರ್ಜರಿ ಸರ್ಜರಿ ನಡೆಸಲು ಬಿಜೆಪಿ ವರಿಷ್ಠರು ಮುಂದಾಗಿದ್ದಾರೆ. ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡದ ಸಚಿವರನ್ನು ಕೈಬಿಟ್ಟು, ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿರುವವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ವರಿಷ್ಠರು ಆಲೋಚಿಸಿದ್ದಾರೆ.

ಕೊರೋನಾ ಸೋಂಕು ಒಂದು ಹಂತಕ್ಕೆ ಬಂದು ಆರ್ಭಟ ಕಡಿಮೆಯಾಗುತ್ತಿದ್ದಂತೆಯೆ ಎಲ್ಲಿ ಸಚಿವ ಪದವಿ ಹೋಗಿ ಮಾಜಿಗಳಾಗಿ ಬಿಡುತ್ತೇವೋ ಎಂಬ ಅಳುಕು ಹಲವು ಸಚಿವರನ್ನು ಈಗಿನಿಂದಲೇ ಕಾಡಲಾರಂಭಿಸಿದೆ.ಇನ್ನೂ ಕೆಲವು ಸಚಿವರ ಕಾರ್ಯಕ್ಷಮತೆ ಆಧರಿಸಿ ಖಾತೆ ಬದಲಾವಣೆ ಮಾಡಲಾಗುವುದು ಎಂದೂ ಮೂಲಗಳು ಹೇಳಿವೆ.

ಉತ್ತಮವಾಗಿ ಕೆಲಸ ನಿರ್ವಹಿಸಿದವರಿಗೆ ಉತ್ತಮ ಖಾತೆ. ಈವರೆಗೆ ತಮ್ಮ ಕೆಲಸದಲ್ಲಿ ಕಳಪೆ ನಿರ್ವಹಣೆ ಮಾಡಿರುವ ಸಚಿವರಿಗೆ ಕೋಕ್ ನೀಡಲಿದ್ದು, ಹೊಸಬರಿಗೆ ಸಂಪುಟದಲ್ಲಿ ಆದ್ಯತೆ ನೀಡಲು ಅಲೋಚನೆ ಮಾಡಲಾಗಿದೆ ಎಂದು ಹೇಳಲಾಗಿದೆ.

ಆರಂಭದಲ್ಲಿ ಸಚಿವರು ಚೆನ್ನಾಗಿ ಕೆಲಸ ಮಾಡಿದರೂ ನಂತರ ಉತ್ಸಾಹ ಕಳೆದುಕೊಂಡು ಕಾಲ ಹರಣ ಮಾಡುತ್ತಿದ್ದಾರೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿವೆ. ಕೆಲವು ಹಿರಿಯ ಸಚಿವರನ್ನು ಸಂಪುಟದಿಂದ ಕೈಬಿಟ್ಟು ಪಕ್ಷದ ಸಂಘಟನೆ ಜವಾಬ್ದಾರಿ ನೀಡುವ ಸಾಧ್ಯತೆಯೂ ಬಹಳವಾಗಿದೆ ಎಂದು ಹೇಳಲಾಗಿದೆ.

ಆಪರೇಷನ್ ಕಮಲದಿಂದ ಸರ್ಕಾರ ರಚನೆಗೆ ಸಾಥ್ ಕೊಟ್ಟವರಿಗೆ ಮೊದಲ ಆದ್ಯತೆ ಜೊತೆಗೆ ಬಿಜೆಪಿಯ 8 ರಿಂದ 10 ಹೊಸ ಶಾಸಕರಿಗೂ ಸಚಿವ ಸ್ಥಾನ ನೀಡುವ ಬಗ್ಗೆ ಬಿಸಿ, ಬಿಸಿ ಚರ್ಚೆ ನಡೆಯುತ್ತಿದೆ.

ವಿಧಾನ ಪರಿಷತ್ ಚುನಾವಣೆ, ನಾಮ ನಿರ್ದೇಶನ ಬಳಿಕ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಕೇಂದ್ರದ ಬಿಜೆಪಿ ವರಿಷ್ಠರು ಕೈಹಾಕಲಿದ್ದಾರೆ ಎಂದು ಹೇಳಲಾಗುತ್ತಿದೆ.

ನಿರ್ಗಮನ ಯಾರು?
ಕೆಲವೊಂದು ಬಲ್ಲ ಮೂಲಗಳ ಮಾಹಿತಿಯ ಪ್ರಕಾರ ಡಿಸಿಎಂ ಅಶ್ವಥ್ ನಾರಾಯಣ್, ಕೆ.ಎಸ್.ಈಶ್ವರಪ್ಪ, ,ಜಗದೀಶ್ ಶೆಟ್ಟರ್, ಸಿ.ಸಿ.ಪಾಟೀಲ್, ಕೋಟಾ ಶ್ರೀನಿವಾಸ ಪೂಜಾರಿ, ಶೆಶಿಕಲಾ ಜೊಲ್ಲೆ ಅವರುಗಳಿಗೆ ಕೊಕ್ ಕೊಡುವ ಸಾಧ್ಯತೆ ದಟ್ಟವಾಗಿದೆ ಎಂದು ಹೇಳಲಾಗುತ್ತಿದೆ.

ಅರವಿಂದ ಲಿಂಬಾವಳಿ, ಉಮೇಶ್ ಕತ್ತಿ, ಹಾಲಾಡಿ ಶ್ರೀನಿವಾಸ ಶೆಟ್ಟಿ, ಕಾರ್ಕಳದ ಸುನೀಲ್ ಕುಮಾರ್, ಮುರುಗೇಶ್ ನಿರಾಣಿಗೆ ಸಂಪುಟದಲ್ಲಿ ಅವಕಾಶ ಮಾಡಿಕೊಡುವ ಸಾಧ್ಯತೆ ಬಹಳವಾಗಿದೆ .

ಇತ್ತಿಚೆಗೆ ಬಹಳ ವಿವಾದಕ್ಕೆ ಗುರಿಯಾಗಿರುವ ಸಚಿವ ಜೆ.ಸಿ. ಮಾಧುಸ್ವಾಮಿ ಹಾಗೂ ಡಾ.ಸುಧಾಕರ್, ಡಿಸಿಎಂ ಲಕ್ಷ್ಮಣ ಸವದಿ, ಆರ್.ಅಶೋಕ್, ಸುರೇಶ್ ಕುಮಾರ್, ಸೇರಿದಂತೆ ಕೆಲವು ಸಚಿವರ ಖಾತೆಗಳು ಬದಲಾವಣೆ ಆಗಲಿದೆ ಎಂದು ಹೇಳಲಾಗುತ್ತಿದೆ.

ಇನ್ನು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಶಾಸಕ ಸ್ಥಾನ ತ್ಯಾಗ ಮಾಡಿ ನಂತರ ಚುನಾವಣೆಯಲ್ಲಿ ಸೋತಿರುವ ಎಚ್. ವಿಶ್ವನಾಥ್, ಹೊಸಕೋಟೆಯ ಮಾಜಿ ಶಾಸಕ ಎಂಟಿಬಿ ನಾಗರಾಜ್ ಅವರಿಗೂ ಸಂಪುಟದಲ್ಲಿ ಅವಕಾಶ ಮಾಡಿಕೊಡಲು ತೀರ್ಮಾನ ಮಾಡಲಾಗಿದೆ. ಅದಕ್ಕೆ ಮೊದಲು ಅವರುಗಳನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕಿದ್ದು. ವರಿಷ್ಠರು ಇತ್ತ ಕಡೆ ಸಹ ಗಮನ ಹರಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.

Spread the love
  • Related Posts

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಬಾರಿ ಮಳೆ ಹಿನ್ನೆಲೆಯಲ್ಲಿ 30/08/2025ನೇ ಶುಕ್ರವಾರ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶವನ್ನು ಹೊರಡಿಸಿದೆ. Spread the love

    Spread the love

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಸಕಲೇಶಪುರ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಾನುಬಾಳು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸಕಲೇಶಪುರ ವತಿಯಿಂದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಪರಮ ಪೂಜ್ಯ ಶ್ರೀ ಡಾ.ಡಿ ವಿರೇಂದ್ರ…

    Spread the love

    You Missed

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • August 29, 2025
    • 283 views
    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    • By admin
    • August 29, 2025
    • 45 views
    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    • By admin
    • August 28, 2025
    • 316 views
    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    • By admin
    • August 28, 2025
    • 55 views
    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    • By admin
    • August 27, 2025
    • 111 views
    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ ಆಯ್ಕೆ

    • By admin
    • August 25, 2025
    • 52 views
    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ