ಬೆಂಗಳೂರು, ಸೆ.24: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನಲ್ಲಿ ದಾಖಲಾಗಿರುವ Special Leave Petition (Crl.) No.5763 of 2026ರ ವಿಚಾರಣೆಯ ಹಿನ್ನೆಲೆಯಲ್ಲಿ, ಪ್ರಕರಣದ ಮರುತನಿಖೆಗಾಗಿ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು (SIT) ರಚಿಸಿ ಆದೇಶ ಹೊರಡಿಸಿದೆ.
ಎಸ್ಐಟಿ ತಂಡದ ಮುಖ್ಯಸ್ಥರಾಗಿ ಪೊಲೀಸ್ ಮಹಾನಿರೀಕ್ಷಕ (IGP) ಎನ್. ಶಶಿಕುಮಾರ್, ಐಪಿಎಸ್ ಅವರನ್ನು ನೇಮಕ ಮಾಡಲಾಗಿದೆ.
ತಂಡದ ಸದಸ್ಯರಾಗಿ ಕೆಳಗಿನ ಅಧಿಕಾರಿಗಳನ್ನು ನೇಮಿಸಲಾಗಿದೆ:
1.ಎನ್. ಶಶಿಕುಮಾರ್, ಐಪಿಎಸ್ – ಪೊಲೀಸ್ ಮಹಾನಿರೀಕ್ಷಕರು – ಮುಖ್ಯಸ್ಥರು,
2. ಸಿ.ಹೆಚ್. ಸುಧೀರ್ ಕುಮಾರ್ ರೆಡ್ಡಿ, ಐಪಿಎಸ್ – ಪೊಲೀಸ್ ಆಯುಕ್ತರು, ಮಂಗಳೂರು ನಗರ – ಸದಸ್ಯರು,
3.ನಿಶಾ ಜೇಮ್ಸ್, ಐಪಿಎಸ್ – ಪೊಲೀಸ್ ಅಧೀಕ್ಷಕರು, ರಾಜ್ಯ ಗುಪ್ತವಾರ್ತೆ – ಸದಸ್ಯರು,
4.ಲೋಕೇಶ್ ಜಲಸಾಗರ್, ಐಪಿಎಸ್ – ಪೊಲೀಸ್ ಅಧೀಕ್ಷಕರು, ಸಿಐಡಿ, ಬೆಂಗಳೂರು – ಸದಸ್ಯರು,
5 .ವೆಂಕಟೇಶ್ ಪ್ರಸನ್ನ – ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಬೆಂಗಳೂರು ಗ್ರಾಮಾಂತರ ಜಿಲ್ಲೆ – ಸದಸ್ಯರು
ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ಮರು ತನಿಖೆಗೆ ಒತ್ತಾಯಗಳು ಕೇಳಿಬಂದಿದ್ದವು. ಇದೀಗ ಸುಪ್ರೀಂ ಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ಎಸ್ಐಟಿ ರಚಿಸಿರುವ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ಮತ್ತೆ ಚುರುಕುಗೊಳ್ಳುವ ನಿರೀಕ್ಷೆ ಮೂಡಿದೆ. ಎಸ್ಐಟಿ ತಂಡವು ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು, ಹಿಂದಿನ ತನಿಖೆಯ ವಿವರಗಳು ಹಾಗೂ ಲಭ್ಯವಿರುವ ಇತರೆ ಮಾಹಿತಿಗಳನ್ನು ಪರಿಶೀಲಿಸಿ, ಸರ್ಕಾರದ ಆದೇಶದಂತೆ ಮುಂದಿನ ತನಿಖಾ ಕ್ರಮಗಳನ್ನು ಕೈಗೊಳ್ಳಲಿದೆ.



