ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಮಂಗಳೂರು, ಆಗಸ್ಟ್ 7: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಹವಾಮಾನ ಮುನ್ಸೂಚನೆಯಂತೆ ಪುತ್ತೂರು ಉಪವಿಭಾಗ ವ್ಯಾಪ್ತಿಯಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುಂಜಾಗ್ರತಾ ಕ್ರಮವಾಗಿ 2026ರ ಆಗಸ್ಟ್ 8 (ಶನಿವಾರ) ರಂದು ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ರಜೆ ಘೋಷಿಸಿದೆ.

Oplus_16908288

ಈ ಆದೇಶವು ಎಲ್ಲಾ ವಸತಿ ಶಾಲಾ-ಕಾಲೇಜುಗಳಿಗೂ ಅನ್ವಯವಾಗುತ್ತದೆ. ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ–2005ರ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.

ಜಿಲ್ಲಾಡಳಿತವು ಸಾರ್ವಜನಿಕರಿಗೆ ಹಲವು ಮುನ್ನೆಚ್ಚರಿಕೆ ಸೂಚನೆಗಳನ್ನು ನೀಡಿದ್ದು, ಮಕ್ಕಳು ನೀರಿರುವ ತಗ್ಗು ಪ್ರದೇಶಗಳು, ಕೆರೆ, ನದಿತೀರ ಹಾಗೂ ಸಮುದ್ರ ತೀರಗಳಿಗೆ ತೆರಳದಂತೆ ಪಾಲಕರು ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಹಾಗೂ ಪ್ರವಾಸಿಗರು ಮತ್ತು ಸಾರ್ವಜನಿಕರು ನದಿತೀರ ಹಾಗೂ ಸಮುದ್ರ ತೀರಗಳಿಗೆ ತೆರಳದಂತೆ ಸೂಚಿಸಲಾಗಿದೆ.

ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸುವಂತೆ ನಿರ್ದೇಶನ ನೀಡಲಾಗಿದೆ. ಸಂಬಂಧಪಟ್ಟ ಇಲಾಖೆಗಳು ಪ್ರತಿಯೊಂದು ತಾಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಸೂಚಿಸಲಾಗಿದೆ.

Spread the love
  • Related Posts

    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    ಮೂಡುಬಿದಿರೆ: ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೂಡುಬಿದಿರೆಯ ಕೇಮಾರುವಿನಲ್ಲಿರುವ ಶ್ರೀ ಕ್ಷೇತ್ರ ಸಾಂದೀಪನಿ ಸಾಧನಾಶ್ರಮಕ್ಕೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾ‌ರ್ ಅವರು ₹1 ಕೋಟಿ ಅನುದಾನ ಘೋಷಿಸಿದ್ದು, ಈ ಕುರಿತು ಮಠದ ಈಶ ವಿಠಲದಾಸ ಸ್ವಾಮೀಜಿ ಹರ್ಷ ವ್ಯಕ್ತಪಡಿಸಿದ್ದಾರೆ.…

    Spread the love

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    ರೈತರ ಸಮಸ್ಯೆಗಳ ಕುರಿತು ಪ್ರತ್ಯೇಕವಾಗಿ ಚರ್ಚೆ; ಕರಾವಳಿ ಅಭಿವೃದ್ಧಿಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರಗಳ ನಿರೀಕ್ಷೆ ಮಂಗಳೂರು: ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ಈ ಹಿಂದೆಯೇ ಸ್ಪಷ್ಟವಾಗಿ ತಿರಸ್ಕರಿಸಿದೆ. ಆದರೂ ಕೇಂದ್ರ ಸರ್ಕಾರದಿಂದ ಬಂದಿರುವ ನಿರ್ದೇಶನಗಳ ಹಿನ್ನೆಲೆಯಲ್ಲಿ ಸ್ಥಳೀಯ ರೈತರಲ್ಲಿ…

    Spread the love

    You Missed

    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    • By admin
    • September 19, 2026
    • 6 views
    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

    • By admin
    • September 18, 2026
    • 16 views

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    • By admin
    • September 18, 2026
    • 12 views
    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 24 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 32 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 17 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ