ನವದೆಹಲಿ: ದೇಶಾದ್ಯಂತ ಕೋವಿಡ್-19 ಪ್ರಸರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗಿರುವ 100 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ನೇರವಾಗಿ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಲಿದ್ದಾರೆ.
ಮೇ.18 ಹಾಗೂ 20 ರಂದು ಈ ಸಂವಾದ ನಡೆಯಲಿದೆ. ಮೊದಲ ಸಭೆಯಲ್ಲಿ 9 ರಾಜ್ಯಗಳಿಂದ 46 ಜಿಲ್ಲೆಗಳ ಜಿಲ್ಲಾ ಮ್ಯಾಜಿಸ್ಟ್ರೇಟ್ ಗಳಿ ಭಾಗಿಯಾಗಲಿದ್ದಾರೆ ಹಾಗೂ 10 ರಾಜ್ಯಗಳ 54 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಎರಡನೇ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಈ ಸಭೆಯಲ್ಲಿ ಆಯಾ ರಾಜ್ಯದ ಮುಖ್ಯಮಂತ್ರಿಗಳೂ ಭಾಗಿಯಾಗಲಿದ್ದಾರೆ. ಕೋವಿಡ್-19 ಪರಿಸ್ಥಿತಿಯಲ್ಲಿ ಇದೇ ಮೊದಲ ಬಾರಿಗೆ ಜಿಲ್ಲಾ ಮಟ್ಟದ ಆಡಳಿತಾಧಿಕಾರಿಗಳೊಂದಿಗೆ ಪ್ರಧಾನಿ ಸಂವಾದ ನಡೆಸುತ್ತಿದ್ದಾರೆ.
2020 ರಲ್ಲಿ ಕೋವಿಡ್-19 ಪತ್ತೆಯಾದಾಗಿನಿಂದಲೂ ಈ ವರೆಗೂ ಪ್ರಧಾನಿಗಳು ಮುಖ್ಯಮಂತ್ರಿಗಳೊಂದಿಗೆ ಅಷ್ಟೇ ಸಭೆ ನಡೆಸುತ್ತಿದ್ದರು.