ಅಬುಧಾಬಿ: ಐಪಿಎಲ್ 13ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 5 ವಿಕೆಟ್ ಳಿಂದ ಭರ್ಜರಿ ಜಯಗಳಿಸಿದೆ. ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಚೆನ್ನೈ ನಾಯಕ ಧೋನಿ ನಿರ್ಧಾರ ಫಲ ಕೊಟ್ಟಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗಿಗೆ ಇಳಿಸಲ್ಪಟ್ಟ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ 9 ವಿಕೆಟಿಗೆ 162 ರನ್ ಗಳಿಸಿ ಚೆನ್ನೈ ಸೂಪರ್ ಕಿಂಗ್ಸ್ ಗೆ 163 ರನ್ ಗಳ ಬೃಹತ್ ಸವಾಲೊಡ್ಡಿತ್ತು. ಈ ಸವಾಲಿನ ಮೊತ್ತ ಬೆನ್ನತ್ತಿದ್ದ ಧೋನಿ ಪಡೆ ಡು ಪ್ಲೆಸಿಸ್ ಹಾಗೂ ಅಂಬಾಟಿ ರಾಯಡು ಅವರ ಅಮೋಘ 100 ರನ್ ಗಳ ಜೊತೆಯಾಟದೊಂದಿಗೆ 19.2 ಓವರ್ ಗಳಲ್ಲಿ ಗೆಲುವಿನ ನಗೆ ಬೀರಿತು.