17 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಆಡಳಿತಕ್ಕೆ ಭರ್ಜರಿ ಸರ್ಜರಿ ಮಾಡಿದೆ. 17 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಜಿ.ಕಲ್ಪನಾರನ್ನು ಕಾರ್ಮಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಶ್ರೀವತ್ಸ ಕೃಷ್ಣರನ್ನು ಡಿಪಿಎಆರ್ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ.

ಅಮ್ಲನ್ ಆದಿತ್ಯ ಬಿಸ್ವಾಸ್‌ರನ್ನು ಐಎಂಎ ವಿಶೇಷ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ಹೆಚ್ಚುವರಿ ಹೊಣೆ ನೀಡಲಾಗಿದೆ‌. ಮುನೀಶ್ ಮೌದ್ಗಿಲ್‌ರನ್ನು ಭೂ‌ ಮಾಪನ ಹಾಗೂ ಭೂ ದಾಖಲೆ ಇಲಾಖೆ ಆಯುಕ್ತರಾಗಿ ವರ್ಗಾಯಿಸಲಾಗಿದೆ. ಶಿವಯೋಗಿ ಕಳಸದ್‌ರನ್ನು ಕೃಷಿ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ. ಅನ್ಬು ಕುಮಾರ್‌ ಅವರನ್ನು ಕೆಎಸ್‌ಆರ್‌ಟಿಸಿ ಎಂಡಿಯಾಗಿ ವರ್ಗಾಯಿಸಲಾಗಿದೆ. ಎನ್.ವಿ.ಪ್ರಸಾದ್‌ರನ್ನು ಸಾರಿಗೆ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ಜಿ. ಸತ್ಯವತಿಯನ್ನು ಬಿಎಂಟಿಸಿ ಎಂಡಿಯಾಗಿ ವರ್ಗಾಯಿಸಲಾಗಿದೆ. ಜೊತೆಗೆ ಕೆಪಿಎಸ್​​ಸಿ ಕಾರ್ಯದರ್ಶಿಯಾಗಿಯೂ ಮುಂದುವರಿಯಲಿದ್ದಾರೆ. ರೇಜು ಎಂ.ಟಿ. ಮಹಿಳಾ‌ ಮತ್ತು ಮಕ್ಕಳ ‌ಕಲ್ಯಾಣ ಇಲಾಖೆ ಕಾರ್ಯದರ್ಶಿಯಾಗಿ ವರ್ಗಾವಣೆ ‌ಮಾಡಲಾಗಿದೆ. ದೀಪಾ.ಎಂ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ಸಂಸ್ಥೆಯ ಎಂಡಿಯಾಗಿ ವರ್ಗಾಯಿಸಲಾಗಿದೆ. ಪಲ್ಲವಿ ಅಕುರಾತಿ ಸರ್ವ ಶಿಕ್ಷಣ ಅಭಿಯಾನದ ರಾಜ್ಯ ಯೋಜನಾ ನಿರ್ದೇಶಕರಾಗಿ ವರ್ಗಾವಣೆಯಾಗಿದ್ದಾರೆ.

ವೆಂಕಟೇಶ ಕುಮಾರ್​​ಗೆ ಕಲಬುರಗಿ ವಿಭಾಗದ ಪ್ರಾದೇಶಿಕ ಆಯಕ್ತರಾಗಿ ಹೆಚ್ಚುವರಿ ಹೊಣೆ ನೀಡಲಾಗಿದೆ. ರಾಕೇಶ್ ಕುಮಾರ್‌ರನ್ನು ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾಗಿ ವರ್ಗಾಯಿಸಲಾಗಿದೆ. ರವೀಂದ್ರ ಪಿ.ಎನ್.ರನ್ನು ಬಿಬಿಎಂಪಿ ವಿಶೇಷ ಆಯುಕ್ತ (ಯೋಜನೆ) ವರ್ಗಾವಣೆ ಮಾಡಲಾಗಿದೆ. ಅವಿನಾಶ್ ಮೆನಮ್ ರಾಜೇಂದ್ರನ್ ರನ್ನು ರಾಮನಗರ ಜಿಲ್ಲೆಯ ಡಿಸಿಯಾಗಿ ವರ್ಗಾಯಿಸಲಾಗಿದೆ. ಚಂದ್ರಶೇಖರ ನಾಯಕರನ್ನು ರಾಯಚೂರು ಜಿಲ್ಲೆಯ ಡಿಸಿಯಾಗಿ ವರ್ಗಾವಣೆ ಮಾಡಲಾಗಿದೆ. ವಿಜಯ ಮಹಂತೇಶ್ ಬಿ.ಡಿ ವಿಜಯಪುರ ಡಿಸಿಯಾಗಿ ವರ್ಗಾವಣೆಯಾಗಿದ್ದಾರೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 45 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 79 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 32 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 603 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 148 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 62 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ