
ಮಂಗಳೂರು: ಭಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಜಿಲ್ಲಾಡಳಿತವು 18/08/2025ರಂದು ಶಾಲೆಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ
ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲೆಗೆ ರೆಡ್ ಅಲರ್ಟ್ ನೀಡಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಸೋಮವಾರ(ಆಗಸ್ಟ್ 18) ಜಿಲ್ಲಾದ್ಯಂತ ಅಂಗನವಾಡಿ,ಪ್ರೌಢ ಶಾಲೆಯವರೆಗೆ ಎಲ್ಲಾ ಸರಕಾರಿ, ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆದೇಶಿಸಿದ್ದಾರೆ.ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಭಾರೀ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ.