ಕರಾವಳಿಯಲ್ಲಿ ಅ.18 ರವರೆಗೆ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ!

ಮಂಗಳೂರು: ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತದಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅ.17 ಮತ್ತು 18ರಂದು ಭಾರೀ ಮಳೆ ಬರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

READ ALSO

ಕೇರಳ ಹಾಗೂ ಮಾಹೆಯಲ್ಲಿ ಭೀಕರ ಮಳೆ ಸುರಿಯುತ್ತಿದ್ದು, ಅ.17ರಂದು ಅದು ಕರ್ನಾಟಕ ಕರಾವಳಿ ಪ್ರದೇಶ ತಲುಪುವ ಸಾಧ್ಯತೆ ಇದೆ. ಕಡಲಿನಲ್ಲಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುತ್ತಿದ್ದು, ಇದು 60 ಕಿ.ಮೀ.ವರೆಗೂ ವಿಸ್ತರಿಸುವ ಅಂದಾಜು ಇದೆ. ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.