ಬೆಂಗಳೂರು: ರಾಜ್ಯದಲ್ಲಿಂದು ಕೊರೋನಾ ಸೋಂಕಿನ ಆರ್ಭಟ ಮುಂದುವರೆದಿದ್ದು, ಇಂದು ರಾಜ್ಯದಲ್ಲಿ 8642 ಕೇಸ್ ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 249590 ಕ್ಕೆ ಏರಿಕೆಯಾಗಿದೆ.
ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ ಎರಡೂವರೆ ಲಕ್ಷದ ಗಡಿ ಸಮೀಪಿಸಿದ್ದು, ಒಟ್ಟು 2,49,590 ಸೋಂಕು ಪ್ರಕರಣಗಳು ದಾಖಲಾಗಿವೆ. ಈ ನಡುವೆ ಸೋಂಕಿತರ ಚೇತರಿಕೆ ಸಂಖ್ಯೆಯೂ ಒಂದೂವರೆ ಲಕ್ಷದ ಗಡಿಯನ್ನು ದಾಟಿರುವುದು ಆಶಾದಾಯಕ ವಿಷಯವಾಗಿದೆ. 1,64,150 ಸೊಂಕಿತರು ಇದೀಗ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಇದೀಗ ಒಟ್ಟು 81,097 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣಗಳಿವೆ.
ಇನ್ನೂ, ರಾಜ್ಯದಲ್ಲಿ ಇಂದು 126 ಮಂದಿ ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸಾವಿನ ಸಂಖ್ಯೆ 4327 ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಇಂದು 56 ಜನರು ಕೊರೋನಾ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ಬೆಂಗಳೂರಿನಲ್ಲಿ ಕೊರೊನಾ ಸಾವಿನ ಸಂಖ್ಯೆ 1588 ಕ್ಕೆ ಏರಿಕೆಯಾಗಿದೆ.