ರಾಜ್ಯದಲ್ಲಿಂದು ಗಣನೀಯ ಸಂಖ್ಯೆಯಲ್ಲಿ ಏರಿಕೆ ಕಂಡ ಸೋಂಕಿತರ ಸಂಖ್ಯೆ!

ಬೆಂಗಳೂರು: ರಾಜ್ಯದಲ್ಲಿಂದು ಕೊರೋನಾ ಸೋಂಕಿನ ಆರ್ಭಟ ಮುಂದುವರೆದಿದ್ದು, ಇಂದು ರಾಜ್ಯದಲ್ಲಿ 8642 ಕೇಸ್ ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 249590 ಕ್ಕೆ ಏರಿಕೆಯಾಗಿದೆ.

ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ ಎರಡೂವರೆ ಲಕ್ಷದ ಗಡಿ ಸಮೀಪಿಸಿದ್ದು, ಒಟ್ಟು 2,49,590 ಸೋಂಕು ಪ್ರಕರಣಗಳು ದಾಖಲಾಗಿವೆ. ಈ ನಡುವೆ ಸೋಂಕಿತರ ಚೇತರಿಕೆ ಸಂಖ್ಯೆಯೂ ಒಂದೂವರೆ ಲಕ್ಷದ ಗಡಿಯನ್ನು ದಾಟಿರುವುದು ಆಶಾದಾಯಕ ವಿಷಯವಾಗಿದೆ. 1,64,150 ಸೊಂಕಿತರು ಇದೀಗ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಇದೀಗ ಒಟ್ಟು 81,097 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣಗಳಿವೆ.

READ ALSO

ಇನ್ನೂ, ರಾಜ್ಯದಲ್ಲಿ ಇಂದು 126 ಮಂದಿ ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸಾವಿನ ಸಂಖ್ಯೆ 4327 ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು 56 ಜನರು ಕೊರೋನಾ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ಬೆಂಗಳೂರಿನಲ್ಲಿ ಕೊರೊನಾ ಸಾವಿನ ಸಂಖ್ಯೆ 1588 ಕ್ಕೆ ಏರಿಕೆಯಾಗಿದೆ.