BIG NEWS : ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್ ಲೈನ್ ಪರೀಕ್ಷೆ!

ಬೆಂಗಳೂರು : ರಾಜ್ಯ ಸರ್ಕಾರವು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಸಂಬಂಧ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್ ಲೈನ್ ನಲ್ಲಿ ಪರೀಕ್ಷೆ ನಡಸಲು ಮುಂದಾಗಿದೆ.

ಈ ವರ್ಷ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುವುದಿಲ್ಲ ಎಂದು ಘೋಷಿಸಿದ್ದ ರಾಜ್ಯ ಸರ್ಕಾರ ಇದೀಗ ಪ್ರಮೋಟ್ ಗಾಗಿ ಆನ್ ಲೈನ್ ನಲ್ಲಿ ಪರೀಕ್ಷೆ ನಡೆಸಲು ಮುಂದಾಗಿರುವುದು ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ಎದುರಾಗಿದೆ.

READ ALSO

ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಥಮ ಪಿಯುಸಿಗೆ ಎರಡು ಮಾದರಿಯ ಪ್ರಶ್ನೆ ಪತ್ರಿಕೆ ರೂಪಿಸಿ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಿದೆ.

ಈ ಪ್ರಶ್ನೆಪತ್ರಿಕೆಗಳನ್ನು ವಿದ್ಯಾರ್ಥಿಗಳು ಡೌನ್ ಲೋಡ್ ಮಾಡಿಕೊಂಡು ಉತ್ತರ ಬರೆದು, ವಾಟ್ಸ್ ಆಯಪ್, ಇ-ಮೇಲ್, ಅಂಚೆ ಮೂಲಕ ಉಪನ್ಯಾಸಕರಿಗೆ ಸಲ್ಲಿಸಬೇಕು. ಅದನ್ನು ಉಪನ್ಯಾಸಕರು ಮೌಲ್ಯಮಾಪನ ಮಾಡಿ ಸ್ಟೂಡೆಂಟ್ ಅಚೀವ್ ಮೆಂಟ್ ಟ್ರಾಕಿಂಗ್ ಸಿಸ್ಟಂನಲ್ಲಿ ಅಪ್ ಲೋಡ್ ಮಾಡುವಂತೆ ಸೂಚಿಸಲಾಗಿದೆ.