ಪುತ್ತೂರು: ಅರ್ಲಪದವು ಸಮೀಪ ಕಡಮ್ಮಾಜೆ ಎಂಬಲ್ಲಿ ಜೆಸಿಬಿಯಲ್ಲಿ ಮಣ್ಣು ಅಗೆಯುವ ಸಂದರ್ಭ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆ ನಡೆದಿದೆ.
ಕೋಳಿ ತ್ಯಾಜ್ಯ ಹಾಕುತ್ತಿದ್ದ ಗುಂಡಿಯ ಪೈಪ್ ಸರಿಪಡಿಸಲು ಇಳಿದಿರುವ ವೇಳೆ ಪೈಪ್ ಮುರಿದು ಬಿದ್ದು ಇಬ್ಬರು ಕಾರ್ಮಿಕರು ಹೊಂಡಕ್ಕೆ ಬಿದ್ದಿದ್ದಾರೆ. ಇದೇ ವೇಳೆ ಪಕ್ಕದಲ್ಲಿಯೇ ಜೆಸಿಬಿ ಮಣ್ಣು ಅಗೆಯುತ್ತಿದ್ದುದರಿಂದ ಮಣ್ಣು ಜರಿದು ಹೊಂಡದೊಳಗೆ ಬಿದ್ದಿದೆ. ಇದರಿಂದ ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟಿದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೃತ ಕೂಲಿ ಕಾರ್ಮಿಕರಾದ ಪಾರ್ಪಳ್ಳ ನಿವಾಸಿಗಳಾದ ಬಾಬು ಮತ್ತು ರವಿ ಎಂದು ತಿಳಿದು ಬಂದಿದ್ದು ಇದರಲ್ಲಿ ಬಾಬುರವರ ಮೃತದೇಹ ಸಿಕ್ಕಿದ್ದು ರವಿ ಎಂಬವರ ಮೃತದೇಹ ಪತ್ತೆ ಕಾರ್ಯ ಮಾಡುತ್ತಿದ್ದಾರೆ. ಪುತ್ತೂರು ಅಗ್ನಿಶಾಮಕದಳ ಹಾಗೂ ಸಂಪ್ಯ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.