ವಿಜಯಪುರ: ಟವೇರಾ ವಾಹನಕ್ಕೆ ಲಾರಿವೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಕ್ರೀಡಾಪಟುಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಗಾಳ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ-218ರಲ್ಲಿ ಸಂಭವಿಸಿದೆ.
ಮೃತ ಕ್ರೀಡಾಪಟುಗಳನ್ನು ಸೋಹೆಲ್ (22) ಹಾಗೂ ಮಹಾದೇವ (20) ಎಂದು ಗುರುತಿಸಲಾಗಿದೆ.
ಕಬಡ್ಡಿ ಪ್ರೋ ಲೀಗ್ ಪಂದ್ಯಾವಳಿಯ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಲು ಹುಬ್ಬಳ್ಳಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಘಟನೆಯಲ್ಲಿ ಇನ್ನೂ ಆರು ಕ್ರೀಡಾಪಟುಗಳು ಗಾಯಗೊಂಡಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕೊಲ್ಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದಾರೆ.