2021-22ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ: ದಾಖಲೆ ಮಟ್ಟದಲ್ಲಿ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ

ಬೆಂಗಳೂರು: 2021-22ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ (Rajyotsava Award 2021) ಈ ಬಾರಿ ದಾಖಲೆ ಮಟ್ಟದಲ್ಲಿ ಅರ್ಜಿ ಸಲ್ಲಿಕೆಯಾಗಿವೆ. ಇದೇ ಮೊದಲ ಭಾರಿಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದರಿಂದ ಜನರ ಸ್ಪಂದನೆ ಹೆಚ್ಚಾಗಿದೆ.

ಆನ್ ಲೈನ್ ಹಾಗೂ ಆಫ್ ಲೈನ್ (Online) ಎರಡರಲ್ಲೂ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದ್ದರಿಂದ 28.857 ಜನರು ಆನ್ ಲೈನ್ ಮೂಲಕ ಪ್ರಶಸ್ತಿಗೆ ಶಿಫಾರಸ್ಸು ಮಾಡಿದ್ದಾರೆ ಕಳೆದ 3 ವರ್ಷಗಳ ಪೈಕಿ ಈ ವರ್ಷದ ರಾಜ್ಯೋತ್ಸವ ಪ್ರಶಸ್ತಿಗೆ ಜನರ ಸ್ಪಂದನೆ ಹೆಚ್ಚಾಗಿದೆ. ಸೇವಾಸಿಂಧು ಮೂಲಕ ಸಾಧಕರನ್ನು ಗುರುತಿಸುವ ಅವಕಾಶಕ್ಕೆ ಭಾರೀ ಬೆಂಬಲ ವ್ಯಕ್ತವಾಗಿದ್ದು, 2021-22 ನೇ ಸಾಲಿನ 66ನೇ ರಾಜ್ಯೋತ್ಸವ ಪ್ರಶಸ್ತಿಗಾಗಿ 6210 ಅರ್ಜಿಗಳ ಸಲ್ಲಿಕೆಯಾಗಿವೆ.

READ ALSO

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕೇಂದ್ರ ಕಚೇರಿಗೆ ಭೌತಿಕವಾಗಿ 1450 ಅರ್ಜಿಗಳು ಹಾಗೂ `ಸೇವಾ ಸಿಂಧು’ ಮೂಲಕ 4770 ಹೆಸರುಗಳು ಬಂದಿದ್ದು ಅವುಗಳನ್ನು 28,857 ಜನರು ಆನ್ಲೈನ್ ಮೂಲಕ ಶಿಫಾರಸ್ಸು ಮಾಡಿದ್ದಾರೆ. ಶಿಕ್ಷಣ, ಸಾಹಿತ್ಯ, ಸಂಗೀತ, ಕಲೆ, ನಾಟಕ, ಕ್ರೀಡೆ, ಕೃಷಿ, ವಿಜ್ಞಾನ-ತಂತ್ರಜ್ಞಾನ ಸೇರಿದಂತೆ 26 ಕ್ಷೇತ್ರಗಳಲ್ಲಿ ಸಾಧಕರ ಅರ್ಜಿಗಳು ಬಂದಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ (Kannada And Culture Minister V Sunil Kumar) ಮಾಹಿತಿ ನೀಡಿದ್ದಾರೆ.

ಆನ್‌ಲೈನ್‌ ಪ್ರಯೋಗ ಇದೇ ಮೊದಲ ಬಾರಿಗೆ ಮಾಡಲಾಗಿದ್ದು,ಇದು ಅತ್ಯಂತ ಪಾರದರ್ಶಕ ಹಾಗೂ ಪ್ರಜಾಪ್ರಭುತ್ವ ಸಿದ್ಧಾಂತಗಳಿಗೆ ಅನುಗುಣವಾಗಿ ನಡೆಯುತ್ತಿರುವುದು ವಿಶೇಷವಾಗಿದೆ. ಸಾರ್ವಜನಿಕರು ತಮ್ಮ ಮೊಬೈಲ್ ಮೂಲಕವೂ ಸೇವಾ ಸಿಂಧು ಪೋರ್ಟಲ್ ಅನ್ನು ಪ್ರವೇಶಿಸಬಹುದಾಗಿದೆ, ಪ್ರಶಸ್ತಿಗೆ ಶಿಫಾರಸು ಮಾಡುವ ವ್ಯಕ್ತಿಗಳ ಹೆಸರನ್ನು ಕಳುಹಿಸಲು ಅಕ್ಟೋಬರ್ 15 ನೇ ತಾರೀಖಿನವರೆಗೂ ಅವಕಾಶ ಕಲ್ಪಿಸಲಾಗಿತ್ತು.

ಕರ್ನಾಟಕ ಸರ್ಕಾರದ ವತಿಯಿಂದ ನೀಡಲಾಗುವ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರನ್ನು ಆಯ್ದು ಅವರಿಗೆ ಪ್ರಶಸ್ತಿ ನೀಡಲಾಗುತ್ತದೆ. ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರತಿ ವರ್ಷ ನವೆಂಬರ್ 1ರಂದು ಬೆಂಗಳೂರಿನಲ್ಲಿ ಕರ್ನಾಟಕದ ಮುಖ್ಯಮಂತ್ರಿಗಳು ಪ್ರದಾನ ಮಾಡುತ್ತಾರೆ. ಪ್ರಶಸ್ತಿಯು ಒಂದು ಲಕ್ಷ ರೂಪಾಯಿಯ ಗೌರವಧನ, 25 ಗ್ರಾಂ ಚಿನ್ನದ ಪದಕ, ಶಾಲು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತದೆ.