ಮತ್ತೆ ಕೊರೋನಾ ಸದ್ದು ನಾಳೆ CM ನೇತೃತ್ವದಲ್ಲಿ ತುರ್ತು ಸಭೆ

ಬೆಂಗಳೂರು: ಕರ್ನಾಟಕದಲ್ಲಿಯೂ ಕೋವಿಡ್ ಭೀತಿ ಎದುರಾಗಿದ್ದು, ಮುನ್ನೆಚ್ಚರಿಕೆ ಕ್ರಮಗಳ ಕುರಿತು ಚರ್ಚಿಸಲು ನಾಳೆ (ಡಿ.22)ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಈಗಾಗಲೇ ವಿದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ. ಚೀನಾ, ಜಪಾನ್, ಅಮೆರಿಕ,…

ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ಪತ್ತೆ!

ಬೆಂಗಳೂರು: ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ದೃಢಪಟ್ಟಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ 5 ವರ್ಷದ ಬಾಲಕಿಯಲ್ಲಿ ಝೀಕಾ ವೈರಸ್ ಸೋಂಕು ಪತ್ತೆಯಾಗಿದೆ. ಕಳೆದ 15 ದಿನಗಳಿಂದ ಜ್ವರ, ವಾಂತಿ, ಬೇಧಿಯಿಂದ…

ಸೇವಾ ಭಾರತಿ ಕನ್ಯಾಡಿಗೆ “ಅತ್ಯುತ್ತಮ ಸೇವೆ ಸಲ್ಲಿಸಿರುವ ಸಂಸ್ಥೆ” ರಾಜ್ಯ ಪ್ರಶಸ್ತಿ ಪುರಸ್ಕಾರ

ಬೆಂಗಳೂರು: ಬೆಳ್ತಂಗಡಿ ತಾಲೂಕಿನ ಕನ್ಯಾಡಿಯ ಸೇವಾ ಭಾರತಿ ಸಂಸ್ಥೆಗೆ ಕರ್ನಾಟಕ ರಾಜ್ಯ ಸರಕಾರದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯ ಇಲಾಖೆ ವಿಶ್ವ ವಿಕಲಚೇತನರ ದಿನಾಚರಣೆ 2022 ಅಂಗವಾಗಿ ನೀಡುವ ಅತ್ಯುತ್ತಮ ಸೇವೆ ಸಲ್ಲಿಸಿದ ಸಂಸ್ಥೆಯಾಗಿ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದೆ.…

ಎರ್ಮಾಯಿ ಫಾಲ್ಸ್ ನಲ್ಲಿ ನೀರಿನಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿ ಸಾವು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಎರ್ಮಾಯಿ ಫಾಲ್ಸ್ ನಲ್ಲಿ ಸ್ನಾನಕ್ಕೆ ಇಳಿದಿದ್ದ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ನಡೆದಿದೆ. ಧರ್ಮಸ್ಥಳ ಗ್ರಾಮದ ದೊಂಡೋಲೆ ನಿವಾಸಿ, ಉಜಿರೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವಿವೇಕ್ (17ವ) ದುರ್ಘಟನೆಯಲ್ಲಿ ಮೃತಪಟ್ಟ…

ಧರ್ಮಸ್ಥಳದ ಮಂಜೂಷಾ ಸಂಗ್ರಹಾಲಯಕ್ಕೆ ಟಿ-565 ಟ್ಯಾಂಕ್ ನ್ನು ಕೊಡುಗೆಯಾಗಿ ನೀಡಿದ ರಕ್ಷಣಾ ಸಚಿವಾಲಯ

ಧರ್ಮಸ್ಥಳ: ಭಾರತದ ರಕ್ಷಣಾ ಸಚಿವಾಲಯದಿಂದ ಪೂನಾದ ಕೇಂದ್ರೀಯ ರಕ್ಷಣಾ ಡಿಪೋದ ಮೂಲಕ ಮಂಗಳವಾರ ಧರ್ಮಸ್ಥಳದ ಮಂಜೂಷಾ ಸಂಗ್ರಹಾಲಯಕ್ಕೆ ಟಿ-565 ಟ್ಯಾಂಕ್ ಕೊಡುಗೆಯಾಗಿ ನೀಡಲಾಯಿತು. ದೇಶದ ರಕ್ಷಣಾ ಕಾರ್ಯದಲ್ಲಿ ಸುಮಾರು 40 ವರ್ಷಗಳ ಕಾಲ ಇದು ಬಳಕೆಯಾಗಿದೆ. 1971ರ ಇಂಡೋ ಪಾಕ್ ಯುದ್ಧದಲ್ಲಿ…

ಸುರತ್ಕಲ್ ಟೋಲ್ ಗೇಟ್ ತೆರವು ಘೋಷಣೆ ಬೆನ್ನಲ್ಲೇ ಹೆಜಮಾಡಿ ಟೋಲ್ ದರ ದಲ್ಲಿ ಭಾರಿ ಪರಿಷ್ಕರಣೆ

ಮಂಗಳೂರು: ಹಲವು ಪ್ರತಿಭಟನೆಗಳ ನಂತರ ಸುರತ್ಕಲ್ ಟೋಲ್‌ಗೇಟ್ ತೆರವು ಘೋಷಣೆಯಾಗಿದ್ದು ಇದರ ಬೆನ್ನಲ್ಲೇ ಇದೀಗ ಹೆಜಮಾಡಿಯಲ್ಲಿ ಟೋಲ್ ಪರಿಷ್ಕರಣೆ ಮಾಡಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದೆ. ಭಾರಿ ಪ್ರತಿಭಟನೆಯ, ಹೋರಾಟದ ನಂತರ ಸುರತ್ಕಲ್ ಟೋಲ್ ರದ್ದಾಗಿದ್ದು ಹೇಜಮಾಡಿ ಟೋಲ್ ದರ…

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆಯವರಿಗೆ 75ನೇ ಜನ್ಮದಿನದ ಸಂಭ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ನ. 25ರಂದು 75ನೇ ವಸಂತಕ್ಕೆ ಕಾಲಿಡಲಿದ್ದು, ತಮ್ಮ ನಿವಾಸದಲ್ಲಿ ಸರಳವಾಗಿ ಜನ್ಮದಿನಾಚರಣೆ ಆಚರಿಸಿಕೊಳ್ಳಲಿರುವರು. ಧರ್ಮಾಧಿಕಾರಿಗಳಾಗಿದ್ದ ಕೀರ್ತಿಶೇಷ ಡಿ. ರತ್ಮವರ್ಮ ಹೆಗ್ಗಡ ಮತ್ತು ರತ್ನಮ್ಮ ದಂಪತಿಯ ಹಿರಿಯ ಪುತ್ರನಾಗಿ 1948ರ…

ಚಾರ್ಮಾಡಿ ಘಾಟಿಯ ಮಲಯ ಮಾರುತ ಬಳಿ ಕಾರು ಪಲ್ಟಿಯಾಗಿ 5 ಮಂದಿಗೆ ಗಾಯ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ 5 ಮಂದಿ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚಾರ್ಮಾಡಿ ಘಾಟಿಯ ಮಲಯ ಮಾರುತ ಬಳಿ ನಡೆದಿದೆ. ಕೋಲಾರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ಕಾರು20 ಅಡಿ…

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಹಳೇ ವಿದ್ಯಾರ್ಥಿ ರಕ್ಷಿತಾ.MB ಪ್ಯಾರಾಮಿಲಿಟರಿಗೆ ಆಯ್ಕೆ

ಧರ್ಮಸ್ಥಳ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಹಳೇ ವಿದ್ಯಾರ್ಥಿ ರಕ್ಷಿತಾ.MB ಇವರು Paramilitary force SSC GD(Assam rifles) ಆಯ್ಕೆಯಾಗಿರುತ್ತಾರೆ. ಶ್ರೀಯುತ ಭಾಸ್ಕರ ಮತ್ತು ಮಮತಾ ದಂಪತಿಗಳು ಪುತ್ರಿಯಾದ ಇವರು ಮೂಲತಃ ಸುಳ್ಯ ತಾಲೂಕಿನ ಐವರ್ನಾಡಿನವರಾಗಿದ್ದು ಪ್ರಸ್ತುತ ಬೆಳ್ತಂಗಡಿ ತಾಲೂಕಿನ…

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕುಡಿಯುವ ನೀರು ಸರಬರಾಜು ಯೋಜನೆಗೆ ಚಾಲನೆ

ಧರ್ಮಸ್ಥಳ: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಬೆಂಗಳೂರು, ಹಾಗೂ ಗ್ರಾಮ ಪಂಚಾಯತ್ ಧರ್ಮಸ್ಥಳ ಇದರ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ದೇವಸ್ಥಾನ ಮತ್ತು ಪಟ್ಟಣಕ್ಕೆ 26.06 ಕೋಟಿ ವೆಚ್ಚದಲ್ಲಿ ಕುಡಿಯುವ ನೀರು ಸರಬರಾಜು ಯೋಜನೆಗೆ ಮಾನ್ಯ ನಗರಾಭಿವೃದ್ಧಿ…