ರಾಜ್ಯಸಭಾ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿಯಡಿ 2ಕೋ.ರೂ ಮಂಜೂರು

ಬೆಳ್ತಂಗಡಿ: ರಾಜ್ಯ ಸಭಾ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿಯಡಿ ಮಂಜೂರುಗೊಂಡಿರುವ ರೂ. 2 ಕೋ.ರೂ. ಅನುದಾನದಡಿ ಬೆಳ್ತಂಗಡಿ ನಗರದ ಕೆಇಬಿ-ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯ ಅಗಲೀಕರಣ-ಡಾಂಬರೀಕರಣ ಮತ್ತು ಒಳಚರಂಡಿ ನಿರ್ಮಾಣದ ಶಿಲಾನ್ಯಾಸವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ನೆರವೇರಿಸಿದರು.

ಗ್ರಾಮದ ಅಗತ್ಯತೆ ಮತ್ತು ಗ್ರಾಮೀಣ ಜನರ ಜೀವನ ಸ್ಥಿತಿಗತಿ ಬಗ್ಗೆ ಗ್ರಾಮಾಭಿವೃದ್ದಿ ಯೋಜನೆ ಮೂಲಕ ನಿತ್ಯ ವರದಿ ಬರುತ್ತಿದ್ದು, ಇದರಂತೆ ಇಲ್ಲಿಂದ 800 ಕಿ.ಮೀ. ದೂರದ ಬೀದರ್ ಜಿಲ್ಲೆಯ ಸ್ಥಿತಿ ಕುರಿತು ಮಾಹಿತಿ ದೊರೆತ ಕಾರಣ ಅಲ್ಲಿಯ ಜನರ ಜೀವನ ಸುಧಾರಣೆ ಅಗಬೇಕು ಎಂದು ನನ್ನ ರಾಜ್ಯಸಭಾ ಪ್ರದೇಶಾಭಿವೃದ್ಧಿ ನಿಧಿಯಿಂದ ಬೀದರ್ ಜಿಲ್ಲೆಗೆ ಹೈನುಗಾರಿಕೆಗೆ 10 ಕೋಟಿ ರೂ. ಬಳಕೆ ಮಾಡಿದ್ದು ಇದರಿಂದ ನಿತ್ಯ 18 ಸಾವಿರ ಲೀಟರ್ ಉತ್ಪತ್ತಿಯಾಗುತ್ತಿದ್ದ ಹಾಲು ಪ್ರಸ್ತುತ ಒಂದು ಲಕ್ಷದ ನಲುವತ್ತು ಸಾವಿರ ಲೀಟರ್ ಹಾಲು ಉತ್ಪತ್ತಿಯಾಗುತ್ತಿದೆ. ಇದರಿಂದ ಜನರ ಜೀವನ ಮಟ್ಟ ಸುಧಾರಣೆಯಾಗಿದೆ. ಇದೇ ರೀತಿ ಜನರ ಜೀವನ ಮಟ್ಟ ಸುಧಾರಣೆ ಅಗತ್ಯತೆ ಮನಗಂಡು ಮುಂದೆಯೂ ರಾಜ್ಯಸಭಾ ನಿಧಿ ಬಳಸಲಾಗುವುದು ಎಂದು ರಾಜ್ಯಸಭಾ ಸಂಸದ, ಶ್ರಿ ಕ್ಷೇತ್ರ ಧರ್ಮಸ್ಥಳದ ಧರ್ಮಾದಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹೇಳಿದರು.

ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದಕ್ಕಾಗಿ ತಾಲೂಕಿನ ಕೆಲವು ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಗೆ ರಾಜ್ಯಸಭಾ ನಿಧಿಯನ್ನು ಬಳಸಲಾಗಿದೆ. ಗ್ರಾಮಾಭಿವೃದ್ದಿ ಯೋಜನೆಯಿಂದ ಸಾವಿರಾರು ಕುಟುಂಬಗಳಿಗೆ ಬೆಳಕು ಬಂದರೆ, ಸಿರಿ ಸಂಸ್ಥೆಯಿಂದ ಸಾವಿರಾರು ಮಂದಿಗೆ ಉದ್ಯೋಗ ದೊರಕಿದೆ. ಮುಂದೆಯೂ ಇನ್ನಷ್ಟು ಉತ್ಪನ್ನಗಳನ್ನು ತಯಾರಿಸಿ ಮೂರು ಸಾವಿರಕ್ಕೂ ಅಧಿಕ ಮಂದಿಗೆ ಉದ್ಯೋಗ ಸಿಗುವಂತೆ ಮಾಡಲಾಗುವುದು. ಇಲ್ಲಿನ ಶಾಸಕರ, ಪಟ್ಟಣ ಪಂಚಾಯಿತಿ ಅಧ್ಯಕ್ಷರ ,ಸದಸ್ಯರ ಬೇಡಿಕೆಯಂತೆ ಜನರ ಅನುಕೂಲಕ್ಕಾಗಿ ಈ ರಸ್ತೆಗೆ 2 ಕೋಟಿ ರೂ. ಅನುದಾನ ನೀಡಲಾಗಿದೆ ಎಂದರು.


ಶಾಸಕ‌ ಹರೀಶ್ ಪೂಂಜ ಅವರು ಮಾತನಾಡಿ, ಡಾ ಹೆಗ್ಗಡೆಯವರು ತಮ್ಮ ರಾಜ್ಯಸಭಾ ನಿಧಿಯಡಿ ಬೆಳ್ತಂಗಡಿ ಅಯ್ಯಪ್ಪ ಮಂದಿರ ಬಳಿಯಿಂದ ಹುಣ್ಸೆಕಟ್ಟೆ ವರೆಗಿನ ರಸ್ತೆ ಅಭಿವೃದ್ದಿಗೆ 2 ಕೋಟಿ ರೂ. ನೀಡುವ ಮೂಲಕ ಈ ಪ್ರದೇಶದ ಜನರಿಗೆ ಹೆಚ್ಚಿನ ಪ್ರಯೋಜನವಾಗಲಿದೆ ಎಂದರು.

ಉಪ್ಪಿನಂಗಡಿ- ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಗುರುವಾಯನಕರೆಯಲ್ಲಿ ಟ್ರಾಫಿಕ್ ಸಮಸ್ಯೆ ಬಂದಾಗ ಈ ಸಂಪರ್ಕ ರಸ್ತೆ ಸಾವಿರಾರು ಜನರಿಗೆ ಅನುಕೂಲವಾಗಿದೆ.

ಬೀದರ್ ಜಿಲ್ಲೆಯಲ್ಲಿ ಹೈನುಗಾರಿಕೆ ಅಭಿವೃದ್ಧಿಗೆ ಡಾ ಹೆಗ್ಗಡೆಯವರು ತಮ್ಮ ರಾಜ್ಯಸಭಾ ನಿಧಿಯಿಂದ 10 ಕೋಟಿ ರೂ. ಅನುದಾನ ನೀಡಿ ಸಾವಿರಾರು ಕುಟುಂಬಗಳ ಆರ್ಥಿಕ ಬೆಳವಣಿಗೆ ಕಾರಣವಾಗಿದ್ದಾರೆ. ಇದರಿಂದ ದೇಶದಲ್ಲಿ ಸಂಸದರ ನಿಧಿ ವಿನಿಯೋಗ ಹೇಗೆ ಮಾಡಬಹುದೆಂದು ಡಾ. ಹೆಗ್ಗಡೆಯವರು ಕೆಲಸ ಮಾಡಿ ತೋರಿಸಿಕೊಟ್ಟು ಮಾದರಿಯಾಗಿದ್ದಾರೆ ಎಂದರು.


ಕಾರ್ಯಕ್ರಮದಲ್ಲಿ ಉದ್ಯಮಿ ಶಶಿಧರ ಶೆಟ್ಟಿ ಬರೋಡ, ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ, ಉಪಾಧ್ಯಕ್ಷೆ ಗೌರಿ, ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಧ. ಗ್ರಾ. ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್. ಎಸ್, ಸಿರಿ ಸಂಸ್ಥೆ ಟ್ರಸ್ಟಿ ರಾಜೇಶ್ ಪೈ ಉಜಿರೆ, ಪ.ಪಂ.‌ ಮುಖ್ಯಾಧಿಕಾರಿ ರಾಜೇಶ್, ಸಿರಿ ಸಂಸ್ಥೆ ಸಿಇಒ ಪ್ರಸನ್ನ, ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎಸ್. ಜನಾರ್ದನ್ ಪ್ರಸ್ತಾವಿಸಿ, ಸ್ವಾಗತಿಸಿದರು.
ಸಿರಿ ಗೋದಾಮು ವಿಭಾಗದ ಮ್ಯಾನೇಜರ್ ಜೀವನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 93ನೆ ಸರ್ವಧರ್ಮ ಸಮ್ಮೇಳನ ಉದ್ಘಾಟನೆ

    ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಅಂಗವಾಗಿ ನಡೆಯುವ ಸರ್ವಧರ್ಮ ಸಮ್ಮೇಳನದ 93ನೆಯ ಅಧಿವೇಶನದ ಉದ್ಘಾಟನೆಯನ್ನು ಸಚಿವರಾದ ಎಂ‌.ಬಿ ಪಾಟೀಲ್ ರವರು ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಎಲ್ಲಾ ಧರ್ಮಗಳು ಮನುಕುಲದ ಒಳಿತನ್ನು ಬಯಸುತ್ತದೆ ಅದನ್ನು ತಿಳಿದುಕೊಂಡು ನಾವು ಬದುಕನ್ನು ನಡೆಸಿದಾಗ ಎಲ್ಲರಿಗೂ…

    Spread the love

    ಕನ್ಯಾಡಿ ಸೇವಾಭಾರತಿಯಿಂದ MESCOM ಅಧ್ಯಕ್ಷರ ಭೇಟಿ.

    ಮಂಗಳೂರು (ನ. 18) MESCOM ಅಧ್ಯಕ್ಷರಾದ ಶ್ರೀ ಕೆ ಹರೀಶ್ ಕುಮಾರ್ ರವರನ್ನು ಸೇವಾಧಾಮದ ಸಂಸ್ಥಾಪಕರಾದ ಶ್ರೀ ಕೆ ವಿನಾಯಕ ರಾವ್ ಮತ್ತು ತಂಡವು ನವೆಂಬರ್ 18 ರಂದು ಭೇಟಿ ನೀಡಿ ಸೇವಾಭಾರತಿಯ ಸೇವಾ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು. ಬೆನ್ನುಹುರಿ…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 93ನೆ ಸರ್ವಧರ್ಮ ಸಮ್ಮೇಳನ ಉದ್ಘಾಟನೆ

    • By admin
    • November 18, 2025
    • 43 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 93ನೆ ಸರ್ವಧರ್ಮ ಸಮ್ಮೇಳನ ಉದ್ಘಾಟನೆ

    ಕನ್ಯಾಡಿ ಸೇವಾಭಾರತಿಯಿಂದ MESCOM ಅಧ್ಯಕ್ಷರ ಭೇಟಿ.

    • By admin
    • November 18, 2025
    • 11 views
    ಕನ್ಯಾಡಿ ಸೇವಾಭಾರತಿಯಿಂದ MESCOM ಅಧ್ಯಕ್ಷರ ಭೇಟಿ.

    ಬೆಳಾಲು ಶ್ರೀ .ಧ.ಮ.ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

    • By admin
    • November 17, 2025
    • 29 views
    ಬೆಳಾಲು ಶ್ರೀ .ಧ.ಮ.ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

    ರಾಜ್ಯಸಭಾ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿಯಡಿ 2ಕೋ.ರೂ ಮಂಜೂರು

    • By admin
    • November 17, 2025
    • 10 views
    ರಾಜ್ಯಸಭಾ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿಯಡಿ 2ಕೋ.ರೂ ಮಂಜೂರು

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 13ನೇ ವರ್ಷದ ಪಾದಯಾತ್ರೆ ಸಂಪನ್ನ, ಕೃಷಿ ಹಾಗೂ ನರ್ಸಿಂಗ್ ಕಾಲೇಜು ಸ್ಥಾಪನೆ: ಡಾ|| ಹೆಗ್ಗಡೆ

    • By admin
    • November 15, 2025
    • 58 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 13ನೇ ವರ್ಷದ ಪಾದಯಾತ್ರೆ ಸಂಪನ್ನ, ಕೃಷಿ ಹಾಗೂ ನರ್ಸಿಂಗ್ ಕಾಲೇಜು ಸ್ಥಾಪನೆ: ಡಾ|| ಹೆಗ್ಗಡೆ

    ಚಿತ್ರಕಲಾ ಸ್ಪರ್ಧೆಯಲ್ಲಿ ಮುಂಡಾಜೆಯ ಪುಷ್ಟಿ ಪ್ರಥಮ ಸ್ಥಾನ

    • By admin
    • November 15, 2025
    • 39 views
    ಚಿತ್ರಕಲಾ ಸ್ಪರ್ಧೆಯಲ್ಲಿ ಮುಂಡಾಜೆಯ ಪುಷ್ಟಿ ಪ್ರಥಮ ಸ್ಥಾನ