ರಾಜ್ಯಸಭಾ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿಯಡಿ 2ಕೋ.ರೂ ಮಂಜೂರು

ಬೆಳ್ತಂಗಡಿ: ರಾಜ್ಯ ಸಭಾ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿಯಡಿ ಮಂಜೂರುಗೊಂಡಿರುವ ರೂ. 2 ಕೋ.ರೂ. ಅನುದಾನದಡಿ ಬೆಳ್ತಂಗಡಿ ನಗರದ ಕೆಇಬಿ-ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯ ಅಗಲೀಕರಣ-ಡಾಂಬರೀಕರಣ ಮತ್ತು ಒಳಚರಂಡಿ ನಿರ್ಮಾಣದ ಶಿಲಾನ್ಯಾಸವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ನೆರವೇರಿಸಿದರು.

ಗ್ರಾಮದ ಅಗತ್ಯತೆ ಮತ್ತು ಗ್ರಾಮೀಣ ಜನರ ಜೀವನ ಸ್ಥಿತಿಗತಿ ಬಗ್ಗೆ ಗ್ರಾಮಾಭಿವೃದ್ದಿ ಯೋಜನೆ ಮೂಲಕ ನಿತ್ಯ ವರದಿ ಬರುತ್ತಿದ್ದು, ಇದರಂತೆ ಇಲ್ಲಿಂದ 800 ಕಿ.ಮೀ. ದೂರದ ಬೀದರ್ ಜಿಲ್ಲೆಯ ಸ್ಥಿತಿ ಕುರಿತು ಮಾಹಿತಿ ದೊರೆತ ಕಾರಣ ಅಲ್ಲಿಯ ಜನರ ಜೀವನ ಸುಧಾರಣೆ ಅಗಬೇಕು ಎಂದು ನನ್ನ ರಾಜ್ಯಸಭಾ ಪ್ರದೇಶಾಭಿವೃದ್ಧಿ ನಿಧಿಯಿಂದ ಬೀದರ್ ಜಿಲ್ಲೆಗೆ ಹೈನುಗಾರಿಕೆಗೆ 10 ಕೋಟಿ ರೂ. ಬಳಕೆ ಮಾಡಿದ್ದು ಇದರಿಂದ ನಿತ್ಯ 18 ಸಾವಿರ ಲೀಟರ್ ಉತ್ಪತ್ತಿಯಾಗುತ್ತಿದ್ದ ಹಾಲು ಪ್ರಸ್ತುತ ಒಂದು ಲಕ್ಷದ ನಲುವತ್ತು ಸಾವಿರ ಲೀಟರ್ ಹಾಲು ಉತ್ಪತ್ತಿಯಾಗುತ್ತಿದೆ. ಇದರಿಂದ ಜನರ ಜೀವನ ಮಟ್ಟ ಸುಧಾರಣೆಯಾಗಿದೆ. ಇದೇ ರೀತಿ ಜನರ ಜೀವನ ಮಟ್ಟ ಸುಧಾರಣೆ ಅಗತ್ಯತೆ ಮನಗಂಡು ಮುಂದೆಯೂ ರಾಜ್ಯಸಭಾ ನಿಧಿ ಬಳಸಲಾಗುವುದು ಎಂದು ರಾಜ್ಯಸಭಾ ಸಂಸದ, ಶ್ರಿ ಕ್ಷೇತ್ರ ಧರ್ಮಸ್ಥಳದ ಧರ್ಮಾದಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹೇಳಿದರು.

ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದಕ್ಕಾಗಿ ತಾಲೂಕಿನ ಕೆಲವು ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಗೆ ರಾಜ್ಯಸಭಾ ನಿಧಿಯನ್ನು ಬಳಸಲಾಗಿದೆ. ಗ್ರಾಮಾಭಿವೃದ್ದಿ ಯೋಜನೆಯಿಂದ ಸಾವಿರಾರು ಕುಟುಂಬಗಳಿಗೆ ಬೆಳಕು ಬಂದರೆ, ಸಿರಿ ಸಂಸ್ಥೆಯಿಂದ ಸಾವಿರಾರು ಮಂದಿಗೆ ಉದ್ಯೋಗ ದೊರಕಿದೆ. ಮುಂದೆಯೂ ಇನ್ನಷ್ಟು ಉತ್ಪನ್ನಗಳನ್ನು ತಯಾರಿಸಿ ಮೂರು ಸಾವಿರಕ್ಕೂ ಅಧಿಕ ಮಂದಿಗೆ ಉದ್ಯೋಗ ಸಿಗುವಂತೆ ಮಾಡಲಾಗುವುದು. ಇಲ್ಲಿನ ಶಾಸಕರ, ಪಟ್ಟಣ ಪಂಚಾಯಿತಿ ಅಧ್ಯಕ್ಷರ ,ಸದಸ್ಯರ ಬೇಡಿಕೆಯಂತೆ ಜನರ ಅನುಕೂಲಕ್ಕಾಗಿ ಈ ರಸ್ತೆಗೆ 2 ಕೋಟಿ ರೂ. ಅನುದಾನ ನೀಡಲಾಗಿದೆ ಎಂದರು.

ಶಾಸಕ‌ ಹರೀಶ್ ಪೂಂಜ ಅವರು ಮಾತನಾಡಿ, ಡಾ ಹೆಗ್ಗಡೆಯವರು ತಮ್ಮ ರಾಜ್ಯಸಭಾ ನಿಧಿಯಡಿ ಬೆಳ್ತಂಗಡಿ ಅಯ್ಯಪ್ಪ ಮಂದಿರ ಬಳಿಯಿಂದ ಹುಣ್ಸೆಕಟ್ಟೆ ವರೆಗಿನ ರಸ್ತೆ ಅಭಿವೃದ್ದಿಗೆ 2 ಕೋಟಿ ರೂ. ನೀಡುವ ಮೂಲಕ ಈ ಪ್ರದೇಶದ ಜನರಿಗೆ ಹೆಚ್ಚಿನ ಪ್ರಯೋಜನವಾಗಲಿದೆ ಎಂದರು.

ಉಪ್ಪಿನಂಗಡಿ- ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಗುರುವಾಯನಕರೆಯಲ್ಲಿ ಟ್ರಾಫಿಕ್ ಸಮಸ್ಯೆ ಬಂದಾಗ ಈ ಸಂಪರ್ಕ ರಸ್ತೆ ಸಾವಿರಾರು ಜನರಿಗೆ ಅನುಕೂಲವಾಗಿದೆ.

ಬೀದರ್ ಜಿಲ್ಲೆಯಲ್ಲಿ ಹೈನುಗಾರಿಕೆ ಅಭಿವೃದ್ಧಿಗೆ ಡಾ ಹೆಗ್ಗಡೆಯವರು ತಮ್ಮ ರಾಜ್ಯಸಭಾ ನಿಧಿಯಿಂದ 10 ಕೋಟಿ ರೂ. ಅನುದಾನ ನೀಡಿ ಸಾವಿರಾರು ಕುಟುಂಬಗಳ ಆರ್ಥಿಕ ಬೆಳವಣಿಗೆ ಕಾರಣವಾಗಿದ್ದಾರೆ. ಇದರಿಂದ ದೇಶದಲ್ಲಿ ಸಂಸದರ ನಿಧಿ ವಿನಿಯೋಗ ಹೇಗೆ ಮಾಡಬಹುದೆಂದು ಡಾ. ಹೆಗ್ಗಡೆಯವರು ಕೆಲಸ ಮಾಡಿ ತೋರಿಸಿಕೊಟ್ಟು ಮಾದರಿಯಾಗಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಉದ್ಯಮಿ ಶಶಿಧರ ಶೆಟ್ಟಿ ಬರೋಡ, ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ, ಉಪಾಧ್ಯಕ್ಷೆ ಗೌರಿ, ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಧ. ಗ್ರಾ. ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್. ಎಸ್, ಸಿರಿ ಸಂಸ್ಥೆ ಟ್ರಸ್ಟಿ ರಾಜೇಶ್ ಪೈ ಉಜಿರೆ, ಪ.ಪಂ.‌ ಮುಖ್ಯಾಧಿಕಾರಿ ರಾಜೇಶ್, ಸಿರಿ ಸಂಸ್ಥೆ ಸಿಇಒ ಪ್ರಸನ್ನ, ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎಸ್. ಜನಾರ್ದನ್ ಪ್ರಸ್ತಾವಿಸಿ, ಸ್ವಾಗತಿಸಿದರು.
ಸಿರಿ ಗೋದಾಮು ವಿಭಾಗದ ಮ್ಯಾನೇಜರ್ ಜೀವನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Spread the love
  • Related Posts

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಬೆಳ್ತಂಗಡಿ : ದಿಡುಪೆ ಫಾಲ್ಸ್ ಸುತ್ತಮುತ್ತಲಿನ ಪರಿಸರದಲ್ಲಿ ಕಾಡಾನೆಗಳ  ಸಂಚಾರ ಮಾಡುತ್ತಿವೆ. ಪ್ರವಾಸಿಗರು ಈ ಪರಿಸರದಲ್ಲಿ  ಓಡಾಟ ನಡೆಸುವಾಗ ಅಪಾಯ ಎದುರಾಗುವ ಸಾಧ್ಯತೆಗಳಿವೆ. ಈ ಹಿನ್ನಲೆಯಲ್ಲಿ  ಅ.10 ರಿಂದ(ನಾಳೆಯಿಂದ) ದಿಡುಪೆ ಫಾಲ್ಸ್ ಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಮಾಡಿ ಬೆಳ್ತಂಗಡಿ ವಲಯ…

    Spread the love

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ : (ಅ.08) ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಭಾರತೀಯ ಜನತಾ ಪಾರ್ಟಿ ದಕ್ಷಿಣ…

    Spread the love

    You Missed

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    • By admin
    • October 9, 2026
    • 2 views
    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    • By admin
    • October 9, 2026
    • 4 views
    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    • By admin
    • October 5, 2026
    • 11 views
    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    • By admin
    • October 5, 2026
    • 8 views
    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ

    • By admin
    • October 4, 2026
    • 11 views
    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ

    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು

    • By admin
    • October 1, 2026
    • 13 views
    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು