ವರ್ಷಾಂತ್ಯ – ವರ್ಷಾರಂಭಕ್ಕೆ ಮದ್ಯಪ್ರೀಯರಿಗೆ ಬಿಗ್ ಶಾಕ್!

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಕೊರೋನ ಸೊಂಕು ಹೆಚ್ಚಳವಾಗುವ ಸಾದ್ಯತೆಯಿದ್ದು ಈ ಹಿನ್ನಲೆಯಲ್ಲಿ ಅತೀ ಹೆಚ್ಚು ಜನರು ಸೇರುವ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗುತ್ತಿದೆ ಎನ್ನಲಾಗಿದೆ.

ಇವೆಲ್ಲದರ ನಡುವೆ ಡಿಸೆಂಬರ್ 31 ಹಾಗೂ ಜನವರಿ 1 ರಂದು ರಾಜ್ಯಾದ್ಯಂತ ಮದ್ಯದಂಗಡಿಗಳನ್ನು ಬಂದ್ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಈಗಾಗಲೇ ಕೊರೋನ ಸೊಂಕಿನ ಎರಡನೇ ಅಲೆ ರಾಜ್ಯದಲ್ಲಿ ಕಂಡು ಬರುವ ಎಲ್ಲಾ ಸಾಧ್ಯಗಳ ಬಗ್ಗೆ ತಜ್ಞರು ಸರ್ಕಾರಕ್ಕೆ ವರದಿ ನೀಡಿದ್ದು, ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಎಲ್ಲಾ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವ ತೀರ್ಮಾನ ಮಾಡಿದೆ.

READ ALSO