ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

Manglore: ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.

ನಗರ ಜೆಪ್ಪಿನಮೊಗರು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ದೊಡ್ಡ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಬರುತ್ತಿರುವುದಾಗಿ ಕಂಕನಾಡಿ ನಗರ ಪೊಲೀಸರಿಗೆ ಬಂದ ಖಚಿತ ಮಾಹಿತಿಯಂತೆ ಬಜಾಜ್ ಫ್ರೀಡಂ ಬೈಕ್ ನಲ್ಲಿ MDMA ಅನ್ನು ಇಟ್ಟುಕೊಂಡು ಬರುತ್ತಿದ್ದ ಆರೋಪಿಗಳಾದ ಪಿಲಾರು ಹೊಸಗದ್ದೆ ಮನೆ ನಿವಾಸಿ ಪರ್ವೇಜ್ ಅಲಿಯಾಸ್ ದಾವೂದ್ ಪರ್ವೇಜ್ ಹಾಗೂ ಪಿಲಾರು ಪೆರ್ಮಾನ್ನೂರು ನಿವಾಸಿ ನಜರತ್ ಅಲಿ ಎಂಬವರನ್ನು ವಶಕ್ಕೆ ಪಡೆದು ಅವರು ಹೊಂದಿದ್ದ 46,50,000/-ಮೌಲ್ಯದ 465.8 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತುವನ್ನು ಕಂಕನಾಡಿ ನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿ ಫರ್ವೇಜ್ ಎಂಬಾತನು ಮಂಗಳೂರಿನ ಯುವ ಸಮುದಾಯ ಮತ್ತು ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಜಿಲ್ಲೆಯ ಹೊರಗಿನಿಂದ ಬೃಹತ್ ಪ್ರಮಾಣದಲ್ಲಿ ಎಂಡಿಎಂಎ ತಂದು ಮಂಗಳೂರು ನಗರದಲ್ಲಿ ಮಾರಾಟ ಮತ್ತು ಸರಬರಾಜು ಮಾಡಲು ಪ್ರಯತ್ನಿಸುತ್ತಿರುವುದು ತನಿಖೆಯಲ್ಲಿ ತಿಳಿದು ಬಂದಿದೆ. ಆರೋಪಿ ಫರ್ವೇಜ್ ಎಂಬಾತನ ವಿರುದ್ದ ಈಗಾಗಲೇ ಪಾಂಡೇಶ್ವರ, ವಾಮಂಜೂರು, ಬಂದರು ಪೊಲೀಸ್ ಠಾಣೆ, ಬೆಂಗಳೂರಿನ ಅಮೃತಹಳ್ಳಿ, ಮತ್ತು ಉಡುಪಿ ಸೆನ್ ಪೊಲೀಸ್ ಠಾಣೆಗಳಲ್ಲಿ ಮಾದಕ ವಸ್ತು ಮಾರಾಟ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿದ್ದು, ಈತನು ರೂಢಿಗತ ಡ್ರಗ್ ಪೆಡ್ಲರ್ ಆಗಿರುತ್ತಾನೆ. ಈತನ ಸ್ನೇಹಿತ ನಜರತ್ ಅಲಿ ಈತನೊಂದಿಗೆ ಡ್ರಗ್ ಪೆಡ್ಲಿಂಗ್ ವ್ಯವಹಾರಕ್ಕೆ ಸಹಕರಿಸುತ್ತಾ ಈ ಕೃತ್ಯದಲ್ಲಿ ತೊಡಗಿಸಿಕೊಂಡಿರುತ್ತಾನೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 5 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 4 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 5 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 12 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 7 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 9 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ