TRENDING
Next
Prev

ಇಂದಿನಿಂದ ನಾಲ್ಕು ದಿನ ರಾಜ್ಯದಲ್ಲಿ ಬಾರಿ ಮಳೆಯ ಮುನ್ಸೂಚನೆ ಕೊಟ್ಟ ಹವಮಾನ ಇಲಾಖೆ! 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿಜೂನ್‌ 3 ಹಾಗೂ 6 ರಂದು ಭಾರಿ ಮಳೆಯಾಗಲಿದ್ದು ಕೆಲವು ಜಿಲ್ಲೆಗಳಿಗೆ ಯೆಲ್ಲೊಆಲರ್ಟ್‌ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ನೈರುತ್ಯ ಮುಂಗಾರು ಮಾರುತಗಳು ಜೂನ್‌ 3ರಂದು ಕೇರಳ ಕರಾವಳಿಗೆ ಅಪ್ಪಳಿಸಲಿದ್ದು, ರಾಜ್ಯಕ್ಕೆ ಜೂನ್‌ 5ರಂದು ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 5 ದಿನಗಳು ರಾಜ್ಯದ ಒಳನಾಡಿನ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದ್ದು, ವಿಶೇಷವಾಗಿ ಬೀದರ್‌, ಕಲಬುರಗಿ, ಗದಗ, ಕೊಪ್ಪಳ ಮತ್ತು ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

READ ALSO

17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಜೂನ್‌ 4ರವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮುಖ್ಯವಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್‌, ಕಲಬುರಗಿ, ಬೆಂ.ಗ್ರಾಮಾಂತರ, ಬೆಂ.ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಶಿವಮೊಗ್ಗ, ರಾಯಚೂರು, ತುಮಕೂರಿನಲ್ಲಿ ಮಳೆಯಾಗಲಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಜೂನ್‌ 3 ಮತ್ತು 6ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.