ಬೆಂಗಳೂರು: ರಾಜ್ಯದಲ್ಲಿ ಮಳೆ ಆವಾಂತರಕ್ಕೆ ಎಚ್ಚೆತ್ತ ರಾಜ್ಯಸರ್ಕಾರ 50 ಕೋಟಿ ಹಣ ಬಿಡುಗಡೆ ಮಾಡುವಂತೆ ಸಿ.ಎಂ ಬಿ.ಎಸ್.ವೈ ಸೂಚನೆ ನೀಡಿದ್ದಾರೆ.
ಮಳೆ ಅವಾಂತರಕ್ಕೆ ಮುನ್ನೆಚ್ಚರಿಕೆಯಾಗಿ 50ಕೋಟಿ ಬಿಡುಗಡೆ ಮಾಡುವಂತೆ ಹಾಗೂ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿರುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿಯವರಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದು ಪ್ರವಾಹ ಭೀತಿ ಇರುವ ಸ್ಥಳಗಳಲ್ಲಿ ಮುನ್ನೆಚ್ಚರಿಕಾ ಕ್ರಮಕೈಗೊಳ್ಳಲು ಸೂಚಿಸಿದ್ದಾರೆ.
ಸಚಿವರು ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡುವಂತೆ ತಿಳಿಸಿದ್ದಾರೆ.