ಕೊರೋನಾ ನಿಯಂತ್ರಣಕ್ಕಾಗಿ ಕಠಿಣ ನಿಯಮ ಜಾರಿ ಇನ್ಮುಂದೆ ಕೋವಿಡ್ ಪಾಸಿಟಿವ್ ಪ್ರಕರಣ ಕಂಡು ಬಂದ ಮನೆಯ ಸುತ್ತಮುತ್ತಲಿನ 50 ಮನೆಗಳ ಎಲ್ಲರಿಗೂ ಕೋವಿಡ್ ಪರೀಕ್ಷೆ ಕಡ್ಡಾಯ

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೋವಿಡ್ 19 ವೈರಸ್ ಸೋಂಕು ಪ್ರಸಾರ ಸರಪಳಿಯನ್ನು ತಪ್ಪಿಸುವ ಸಲುವಾಗಿ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ವತಿಯಿಂದ ಕಾಲಕಾಲಕ್ಕೆ ಎಲ್ಲಾ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ವೃದ್ಧಿಸುತ್ತಿರುವ ಕಾರಣದಿಂದ ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯ ವಾಗಿರುತ್ತದೆ. ಜಿಲ್ಲೆಯಲ್ಲಿ ಪ್ರಕರಣಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸೋಂಕು ನಿಯಂತ್ರಣ ಮತ್ತು ಜಾಗ್ರತೆ ಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳು ಜಾರಿಯಲ್ಲಿದ್ದು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕಟ್ಟು ನಿಟ್ಟಿನ ಕ್ರಮಕೈಗೊಳುವಂತೆ ದ.ಕ ಜಿಲ್ಲಾಧಿಕಾರಿಯವರು ಆದೇಶಿಸಿದ್ದು ಈ ಕೆಳಕಂಡ ನಿಯಮ ಪಾಲಿಸುವಂತೆ ಸೂಚಿಸಲಾಗಿದೆ.


1.ಪ್ರತಿ ಕೋವಿಡ್ ಪಾಸಿಟಿವ್ ಪ್ರಕರಣ ಕಂಡು ಬಂದ ಮನೆಯ ಸುತ್ತಮುತ್ತಲಿನ 50 ಮನೆಗಳ ಎಲ್ಲರಿಗೂ ಕೋವಿಡ್ ಪರೀಕ್ಷೆ ಕಡ್ಡಾಯವಾಗಿ ಮಾಡಿಸುವುದು.

READ ALSO

  1. ವಸತಿ ಸಮುಚ್ಛಯಗಳಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣ ಕಂಡು ಬಂದ ವ್ಯಕ್ತಿ ವಾಸವಿರುವ ಮಹಡಿ ಮತ್ತು ಆ ಕಟ್ಟಡದಲ್ಲಿರುವ ಎಲ್ಲರನ್ನೂ ಕೋವಿಡ್ ಪರೀಕ್ಷೆಗೆ ಒಳಪಡಿಸುವಂತೆ ಆದೇಶಿಸಿಲಾಗಿದೆ.