ನಿರ್ಣಾಯಕ ಪಂದ್ಯದಲ್ಲಿ ಗೆದ್ದು ಬೀಗಿದ ‘ಭಾರತ’ 3-2 ಅಂತರದಲ್ಲಿ ಸರಣಿ ತನ್ನದಾಗಿಸಿಕೊಂಡ ಕೊಹ್ಲಿ ಪಡೆ

ಅಹಮದಾಬಾದ್: 5ನೇ ಹಾಗೂ ನಿರ್ಣಾಯಕ ಟಿ20 ಕ್ರಿಕೆಟ್‌ ಪಂದ್ಯದಲ್ಲಿ ಇಂಗ್ಲೆಂಡ್‌ ವಿರುದ್ಧ ಭಾರತ ಗೆಲುವು ಸಾಧಿಸಿದೆ. ಈ ಮೂಲಕ ಟೀಮ್ ಇಂಡಿಯಾ 3-2 ಅಂತರದಲ್ಲಿ ಸರಣಿಯನ್ನು ತನ್ನದಾಗಿಸಿಕೊಂಡಿದೆ.

ಅಹಮದಾಬಾದ್‌ನ ಮೋದಿ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಟಿ20 ಸರಣಿಯ 5ನೇ ಮತ್ತು ಕೊನೆಯ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್​ ಮಾಡಿದ ಭಾರತ 224/2 ರನ್ ಗಳಿಸಿತು.

READ ALSO

ಬಳಿಕ ಈ 225ರನ್‌ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 188 ರನ್ ಗಳಿಸಲಷ್ಟೇ ಶಕ್ತವಾಯ್ತು. ಈ ಮೂಲಕ ಭಾರತ 36 ರನ್‌ಗಳೊಂದಿಗೆ 3-2 ಅಂತರದಲ್ಲಿ ಸರಣಿ ಜಯಿಸಿತು.